(ನ್ಯೂಸ್ ಕಡಬ) newskadaba.com . 09. ಬಂಗಾಳಕೊಲ್ಲಿ ಹಾಗೂ ಹಿಂದೂಮಹಾಸಾಗರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು, ಚಂಡಮಾರುತ ಪರಿಚಲನೆ ಶುರುವಾಗಿದೆ. ಕರ್ನಾಟಕ, ತಮಿಳುನಾಡು, ಶ್ರೀಲಂಕಾದಲ್ಲಿ ಡಿಸೆಂಬರ್ 13ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.