ರಸ್ತೆ ಅಪಘಾತ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, . 09. ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನೋರ್ವ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಮಾನ್ವಿ ಹೊರವಲಯದಲ್ಲಿ ಸಂಭವಿಸಿದೆ. ಬೈಕ್‌ ಸವಾರನನ್ನು ಹುಣಸಿಹಾಳಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ (26) ಎಂದು ಗುರುತಿಸಲಾಗಿದೆ.

ಬೈಕ್‌ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿ ರಿಮ್ಸ್‌ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರುಳಿದಿದ್ದಾರೆ. ಬೈಕ್‌ ಹಿಂದೆ ಕುಳಿತಿದ್ದ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ರಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

Also Read  ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು

error: Content is protected !!