(ನ್ಯೂಸ್ ಕಡಬ) newskadaba.com . 10. ಕರ್ನಾಟಕದ 10ನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಮತ್ತು ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿಬಾಯಿಸಿ ರಾಜಕಾರಣದಲ್ಲಿ ವಿಶೇಷ ಛಾಪು ಮೂಡಿಸಿದ್ದ ಎಸ್.ಎಂ.ಕೃಷ್ಣ ಬೆಂಗಳೂರಿನಲ್ಲಿ ಇಹಲೋಕ ತ್ಯಜಿಸಿಸಿದ್ದಾರೆ.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಎಸ್.ಎಂ.ಕೃಷ್ಣರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕೃಷ್ಣರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ(ಡಿಸೆಂಬರ್ 11) ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.