(ನ್ಯೂಸ್ ಕಡಬ) newskadaba.com ಡಿ. 10. ತ್ಯಾಜ್ಯ ಸಾಗಾಟದ ಲಾರಿಗೆ ಗೇಲ್ ಗ್ಯಾಸ್ ಲಿಮಿಟೆಡ್ ಸಿಎನ್.ಜಿ ಇಂಧನ ಸಾಗಾಟದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನ ಶಾಂತಿಯಂಗಡಿ ಬಳಿ ಮಂಗಳವಾರದಂದು ಬೆಳಗ್ಗೆ ನಡೆದಿದೆ.
ಬಂಟ್ವಾಳ ಪುರಸಭೆಯ ತ್ಯಾಜ್ಯ ಸಾಗಾಟದ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಲಾಗಿದ್ದು, ಈ ವೇಳೆ ಇಂಧನ ಸಾಗಾಟದ ಲಾರಿಯು ವೇಗವಾಗಿ ಬಂದು ಚಾಲಕನ ನಿಯಂತ್ರಣ ಕಳೆದುಕೊಂಡು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಇಂಧನ ಸಾಗಾಟದ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಹಿಂಬದಿಯ ಇಂಧನ ಸಿಲಿಂಡರ್ ಇದ್ದ ಜಾಗಕ್ಕೆ ಯಾವುದೇ ಹಾನಿ ಉಂಟಾಗಿಲ್ಲ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.