ಮಾಜಿ ಸಿ.ಎಂ ಎಸ್.ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 10. ಮಾಜಿ ಸಿಎಂ ಎಸ್.ಎಂ ಕೃಷ್ಣರವರು ಬೆಳಗಿನ ಜಾವ ಸುಮಾರು 2.45ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆದು  ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ  ಎಸ್ಎಂ ಕೃಷ್ಣ ನಿಧನರಾಗಿದ್ದಾರೆ.

ದೀರ್ಘ ಕಾಲದವರೆಗೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ  ಅವರು ರಾಜಕೀಯ ಅಂತ್ಯದ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕವೂ ಎಸ್ ಎಂ ಕೃಷ್ಣ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಎಸ್ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು.

Also Read  ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಒಳ ಉಡುಪುವಿನಲ್ಲಿ 2.28 ಕೆ.ಜಿ ಚಿನ್ನ ಪತ್ತೆ

ಇವರ ನಿಧನದ ಹಿನ್ನಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಇದೇ ವೇಳೆ ನಾಳೆ (ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.

error: Content is protected !!
Scroll to Top