ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಸಿ.ಎಂ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com . 10. ಬೆಂಗಳೂರು:  ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆಯು ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶವಾದದ್ದು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ ನವರಾಗಲೀ, ಇನ್ಯಾರೇ ಆಗಲಿ ಈ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.

error: Content is protected !!
Scroll to Top