ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 10. ಪಶು ವ್ಯೆದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಭಾ.ಕೃ.ಅ.ಪ ಕೃಷಿ ವಿಜ್ಞಾನ ಕೇಂದ್ರ (ದ.ಕ) ಮಂಗಳೂರು ಹಾಗೂ ಕರ್ನಾಟಕ ಸರ್ಕಾರ -ಕೃಷಿ ಇಲಾಖೆ, ದಕ್ಷಿಣಕನ್ನಡ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೀದರ್‍ ನ ಕ.ಪ.ಪ.ಮೀ.ವಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕರಾದ ಡಾ. ಎಸ್.ಆರ್. ಸೋಮಶೇಖರ ಉದ್ಘಾಟಿಸಿದರು. ಕೃಷಿ ಇಲಾಖೆಯ ಉಪಕೃಷಿ ನಿರ್ದೇಶಕರಾದ ಕುಮುದಾ ಸಿ.ಎನ್. ಪ್ರಾಸ್ತಾವಿಕ ಮಾತನಾಡಿದರು. ದ.ಕ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ. ಟಿ.ಜೆ. ರಮೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. “ಮಣ್ಣಿನ ಆರೈಕೆ: ಮಾಪನ, ಮೇಲ್ವಿಚಾರಣೆ, ನಿರ್ವಹಣೆ” ಎಂಬ ಧ್ಯೇಯದೊಂದಿಗೆ ಕಾರ್ಯಕ್ರಮ ಆಚರಿಸಲಾಯಿತು. ಫಲಾನುಭವಿಯೇತರಿಗೆ ಅತಿಥಿಗಳಿಂದ ಮಣ್ಣಿನ ಆರೋಗ್ಯ ಚೀಟಿ ವಿತರಿಸಲಾಯಿತು. ಮಂಗಳೂರು ವಿಜ್ಞಾನ ಕೇಂದ್ರ, ಮಣ್ಣು ವಿಜ್ಞಾನಿ ಡಾ.ಮಲ್ಲಿಕಾರ್ಜುನ ಎಲ್., ಮಣ್ಣಿನ ಆರೈಕೆ ಮಾಪನ, ಮೇಲ್ವಿಚಾರಣೆ, ನಿರ್ವಹಣೆಯ ಕುರಿತು ಮಾಹಿತಿ ನೀಡಿದರು.

error: Content is protected !!
Scroll to Top