(ನ್ಯೂಸ್ ಕಡಬ) newskadaba.com ಡಿ. 10. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಆಯ್ಕೆಗಾಗಿ ತ್ರೈವಾರ್ಷಿಕ ಚುನಾವಣೆ 2025ರ ಮಾರ್ಚ್ 9 ರಂದು ಆಯಾ ಜಿಲ್ಲಾ ಕೇಂದ್ರ ಹಾಗೂ 150 ಕ್ಕಿಂತ ಹೆಚ್ಚು ಸದಸ್ಯರಿರುವ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.
ಜನವರಿ 20 ರಿಂದ ಫೆಬ್ರವರಿ 1ರ ವರೆಗೆ ನಾಮಪತ್ರ ಸಲ್ಲಿಕೆ, ಫೆಬ್ರವರಿ 3 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಫೆಬ್ರುವರಿ 10 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪರಿಷತ್ತಿನ ವೆಬ್ಸೈಟ್ ವಿಳಾಸ: www.krvp.in ಸಂಪರ್ಕಿಸುವಂತೆ ರಾಜ್ಯ ವಿಜ್ಞಾನ ಪರಿಷತ್ತಿನ ಆಡಳಿತಾಧಿಕಾರಿ ಹಮೀದುಲ್ಲಾ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.