ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯನ್ನು ಆಯಾ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಂಡವನ್ನು ರಚಿಸಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಹೆಚ್ಚಾಗಿ ದುಡಿಸಿಕೊಳ್ಳುವ ವಲಯಗಳಾದ ಹೊಟೇಲ್, ಗ್ಯಾರೇಜು, ಕಲ್ಲುಕೋರೆ, ಪ್ಯಾಕ್ಟರಿ, ಅಪಾರ್ಟ್‍ ಮೆಂಟ್‍ ಗಳಿಗೆ ಅನಿರೀಕ್ಷಿತ ತಪಾಸಣೆ ನಡೆಸಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಅವರು ಸೂಚಿಸಿದರು.

Also Read  ಅಕ್ರಮ ಮರಳು ಸಾಗಾಟ ಪ್ರಕರಣ➤ ಆರೋಪಿ ಸೆರೆ

ಬಾಲಕಾರ್ಮಿಕ/ಕಿಶೋರ ಕಾರ್ಮಿಕರನ್ನು ಅಂಗಡಿ ಮಳಿಗೆಗಳಲ್ಲಿ ಯಾವುದೇ ಸಂಸ್ಥೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಂಡ ತಪ್ಪಿತಸ್ಥ ಮಾಲೀಕರು ರೂ. 50,000/- ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಹಾಗೂ ಕೆಲಸಕ್ಕೆ ನೇಮಿಸಿಕೊಂಡ ಸಂಸ್ಥೆಗಳ ಪರವಾನಿಗೆಯನ್ನು ರದ್ಧುಪಡಿಸಲಾಗುತ್ತದೆ ಎಂದರು.

ಬಾಲಕಾರ್ಮಿಕ ಕಾಯಿದೆ ಬಗ್ಗೆ ಸಾರ್ವಜನಿಕರಿಗೆ ರೀಲ್ಸ್ ಮೂಲಕ ಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್, ಸಹಾಯಕ ಕಾರ್ಮಿಕ ಆಯುಕ್ತರು ನಾಜಿಯಾ ಸುಲ್ತಾನ, ಕಾರ್ಮಿಕ ಅಧಿಕಾರಿಗಳು, ನಿರೀಕ್ಷಕರು ಹಾಗೂ ಇತರೆ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!
Scroll to Top