(ನ್ಯೂಸ್ ಕಡಬ) newskadaba.com ಮಂಗಳೂರು, . 10. ಕಾವೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.
KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿದೆ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದ್ದು ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ವರದಿ ತಿಳಿಸಿದೆ.