ಪ್ರಕ್ಷುಬ್ಧ ಸಿರಿಯಾದಿಂದ 75 ಮಂದಿ ಭಾರತೀಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ. 11. ಅಸ್ಸಾದ್ ಸರ್ಕಾರ ಪತನಗೊಂಡಿದೆ, ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯನ ಮಾಡಿದ್ದು, ಬಂಡುಕೋರರು ರಾಜಧಾನಿ ಡಮಾಸ್ಕಸ್​ ಸೇರಿದಂತೆ ಬಹುತೇಕ ಎಲ್ಲಾ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಭಾರತವು 75 ಭಾರತೀಯರನ್ನು ಇದೀಗ ಸುರಕ್ಷಿತವಾಗಿ ಲೆಬನಾನ್​ಗೆ ಸ್ಥಳಾಂತರ ಮಾಡಿದ್ದು, ಶೀಘ್ರವೇ ಭಾರತಕ್ಕೆ ಕರೆತರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಿಂದ ಸ್ಥಳಾಂತರಿಸಲ್ಪಟ್ಟವರಲ್ಲಿ ಜಮ್ಮು ಮತ್ತು ಕಾಶ್ಮೀರದ 44 ಯಾತ್ರಾರ್ಥಿಗಳೂ ಸೇರಿದ್ದಾರೆ. ದಂಗೆಯ ನಂತರದ ಸೂಕ್ಷ್ಮ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಇನ್ನೂ ಸಿರಿಯಾದಲ್ಲಿ ವಾಸಿಸುವ ಭಾರತೀಯ ನಾಗರಿಕರಿಗೆ ಎಚ್ಚರಿಕೆ ವಹಿಸಲು ಸಲಹೆ ನೀಡಿದೆ. ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಮಾರ್ಗಸೂಚಿಗಳ ಬಗ್ಗೆಯೂ ಗಮನ ಹರಿಸುವಂತೆ ಮನವಿ ಮಾಡಲಾಗಿದೆ.

Also Read  ವಿದೇಶದಲ್ಲಿ ಸಂಕಷ್ಟಕ್ಕೀಡಾಗಿದ್ದ ಮಂಗಳೂರಿನ ಮಹಿಳೆ ► ISF ಸಹಾಯಹಸ್ತದಿಂದ ಊರಿಗೆ ಮರಳಿದ ವಿಜಯಾ

 

error: Content is protected !!
Scroll to Top