(ನ್ಯೂಸ್ ಕಡಬ) newskadaba.com ಡಿ. 12. ಹಳೆವಿದ್ಯಾರ್ಥಿಯೋರ್ವ ಶಾಲಾ ವಠಾರಕ್ಕೆ ಬಂದು ಶಾಲಾ ಮುಖ್ಯ ಶಿಕ್ಷಕರಿಗೆ ಬೆದರಿಕೆ ಒಡ್ಡಿದ ಘಟನೆ ಮಂಗಳವಾರ ಎಲಿಮಲೆಯಲ್ಲಿ ನಡೆದಿದೆ. ಎಲಿಮಲೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು ಹಗಲು ರಾತ್ರಿ ನಿರಂತರ ಕೆಲಸ ಕಾರ್ಯಗಳು ನಡೆಯುತ್ತಿದ್ದು, ನಿನ್ನೆಯೂ ಹಿಟಾಚಿ ಯಂತ್ರದ ಮೂಲಕ ಕೆಲಸಗಳು ನಡೆಯುತ್ತಿತ್ತು. ಈ ಕಾಮಗಾರಿಯನ್ನು
ವೀಕ್ಷಿಸಲು ಮುಖ್ಯಶಿಕ್ಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶತಮಾನೋತ್ಸವ ಸಮಿತಿಯವರು ಬಂದಿದ್ದು, ಇದೇ ಸಂದರ್ಭ ಹಳೆ ವಿದ್ಯಾರ್ಥಿಗಳು ಶತಮಾನೋತ್ಸವದ ಲಕ್ಕಿಡಿಪ್ ವಿಚಾರವಾಗಿ ಚರ್ಚಿಸುತ್ತಿದ್ದರೆನ್ನಲಾಗಿದೆ.
ಈ ಸಂದರ್ಭ ಹಳೆ ವಿದ್ಯಾರ್ಥಿ ಸಂಘದ ಬಳಿಗೆ ಬಂದ ಮುಖ್ಯ ಶಿಕ್ಷಕರಿಗೆ ಹಳೆ ವಿದ್ಯಾರ್ಥಿಯೋರ್ವ ಅವಾಚ್ಯ ಶಬ್ದಗಳಿಂದ
ನಿಂದಿಸಿ ನಿನ್ನನ್ನು ಹೊರಗೆ ನೋಡಿಕೊಳ್ಳುತ್ತೇನೆ ಎಂದು ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಮುಖ್ಯ ಶಿಕ್ಷಕ ಶ್ರೀಧರ ಗೌಡ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಣಿಕಂಠ ವಿರುದ್ದ ದೂರು ನೀಡಿದ್ದಾರೆ. ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಕೂಡಾ ಮಣಿಕಂಠ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ.