(ನ್ಯೂಸ್ ಕಡಬ) newskadaba.com ಡಿ. 14: ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ ವೇತನದಲ್ಲಿ ಅರ್ಧಕ್ಕಿಂತಲೂ ಅಧಿಕಪಟ್ಟು ಕಡಿತ ಮಾಡುತ್ತಿರುವ ಗುತ್ತಿಗೆ ಸಂಸ್ಥೆಯ ಕ್ರಮವನ್ನು ವಿರೋಧಿಸಿ ಹೊರಗುತ್ತಿಗೆ ಚಾಲಕರು ದಿಢೀರ್ ಕೆಲಸ ಸ್ಥಗಿತಗೊಳಿಸಿರುವ ಘಟನೆ ವರದಿಯಾಗಿದೆ.
ಹೊರಗುತ್ತಿಗೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 60 ಬಸ್ ಚಾಲಕರ ಪೈಕಿ 40 ಮಂದಿ ಶುಕ್ರವಾರ ರಾತ್ರಿಯಿಂದ ಕೆಲಸ ಸ್ಥಗಿತಗೊಳಿಸಿದ್ದಾರೆ. ಇದರಿಂದ ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಸೇವೆ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದುಬಂದಿದೆ. ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಗಳಲ್ಲಿ ಸುಮಾರು 60ರಷ್ಟು ಚಾಲಕರು ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ. ಇವರಿಗೆ ಕೆಎಸ್ಸಾರ್ಟಿಸಿ ನೀಡುವ ಸಂಬಳದಲ್ಲಿ 50 ಶೇಕಡಕ್ಕಿಂತಲೂ ಮೊತ್ತವನ್ನು ಗುತ್ತಿಗೆ ಸಂಸ್ಥೆ ಅಧಿಕ ಕಡಿತ ಮಾಡುತ್ತಿದೆ ಎಂಬುದು ಹೊರಗುತ್ತಿಗೆ ಚಾಲಕರ ಆರೋಪವಾಗಿದೆ. ಈ ಬಗ್ಗೆ ಹಲವು ಭಾರೀ ಮನವಿ ಸಲ್ಲಿಸಿದರೂ ಪ್ರಯೋಜವಾಗದ ಕಾರಣ 40 ಬಸ್ ಚಾಲಕರು ಶುಕ್ರವಾರ ರಾತ್ರಿಯಿಂದ ಹಠಾತ್ ಆಗಿ ಬಸ್ ಚಾಲನೆ ಕೆಲಸ ಸ್ಥಗಿತಗೊಳಿಸಿದ್ದಾರೆ . ಇದರಿಂದ ಪುತ್ತೂರು ಡಿಪೋದಿಂದ ಹೊರಡುವ ಸರಕಾರಿ ಬಸ್ ಸೇವೆ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದುಬಂದಿದೆ.