ಎರಡೂವರೆ ತಿಂಗಳುಗಳ ಕಾಲ ಜೋಗ್ ಫಾಲ್ಸ್ ಪ್ರವೇಶ ಬಂದ್..!

(ನ್ಯೂಸ್ ಕಡಬ) newskadaba.com ಡಿ. 16 ಶಿವಮೊಗ್ಗ: ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ  ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ.

ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಭಂದಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.

Also Read  ಆಸ್ಟ್ರೇಲಿಯಾ: ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದ ಆಸ್ಟ್ರೆಲಿಯಾ ಸಂಸದ

error: Content is protected !!
Scroll to Top