(ನ್ಯೂಸ್ ಕಡಬ) newskadaba.com ಡಿ. 16: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ರವರ ಅರ್ಜಿ ವಿಚಾರಣೆಯನ್ನು ಜನವರಿ 22ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿತು. ಈ ವೇಳೆ ಕೌಂಟರ್ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹಾಗೂ ಸಿಬಿಐ ಇಬ್ಬರೂ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯತ್ನಾಳ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.