ಸೈಬರ್ ಅಪರಾಧದ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಡಿ. 18 ಬೆಳಗಾವಿ: ರಾಜ್ಯದಲ್ಲಿ ಸೈಬರ್‌ ಅಪರಾಧ ನಿಯಂತ್ರಣ ಮತ್ತು ಸೈಬರ್‌ ಸುರಕ್ಷತೆಗಾಗಿ ಹೊಸದಾಗಿ ಪೊಲೀಸ್ ಮಹಾನಿರ್ದೇಶಕ ಹುದ್ದೆಯೊಂದನ್ನು ಸೃಷ್ಟಿಸಲಾಗಿದೆ, ಇದು ಭಾರತದಲ್ಲೇ ಮೊದಲು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಗೆ ಮಂಗಳವಾರ ತಿಳಿಸಿದರು.

ಕಾಂಗ್ರೆಸ್‌ನ ಎನ್‌.ಎ. ಹ್ಯಾರಿಸ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸೈಬರ್ ಅಪರಾಧಗಳ ಮೇಲೆ ನಿಗಾ ಇಡಲು ಪ್ರತ್ಯೇಕವಾಗಿ ಡಿಜಿಪಿ ಇರಲಿದ್ದಾರೆ, ಶೀಘ್ರದಲ್ಲೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ನೂತನ ಡಿಜಿಪಿ ಅವರ ಅಧೀನದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಐಜಿಪಿ, ಎಸ್‌ಪಿ ಮತ್ತು ಕಿರಿಯ ಅಧಿಕಾರಿಗಳು ಇರುತ್ತಾರೆ. ಸೈಬರ್‌ ಅಪರಾಧ ಪ್ರಕರಣಗಳ ತನಿಖೆಯ ಮೇಲುಸ್ತುವಾರಿಗಾಗಿ ಏಳು ವಲಯಗಳಿಗೂ ತಲಾ ಒಬ್ಬ ಎಸ್‌ಪಿಯನ್ನು ನೇಮಿಸಲಾಗಿದೆ. 43 ಸೈಬರ್‌ ಅಪರಾಧ (ಸೆನ್‌) ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ ಎಂದರು.

Also Read  ದೀಕ್ಷಾ ಭೂಮಿ ಯಾತ್ರೆ ನಿಯೋಜನೆಗೆ ಅರ್ಜಿ ಆಹ್ವಾನ

error: Content is protected !!
Scroll to Top