ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 19. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪ್ಯಾನಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು, ಅರೆಕಾಲಿಕಾ ಸ್ವಯಂ ಸೇವಕರು ಮತ್ತು  ಸಮುದಾಯದವರಿಗೆ ತರಬೇತಿ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಂಧ್ಯಾ ಎಸ್  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ. ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ, ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಎಸ್. ನಾಯಕ್ ಲಿಂಗತ್ವ ಅಲ್ಪಸಂಖ್ಯಾತರಿಗೆ ಇರುವ ವಿವಿಧ ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಪ್ಯಾನಲ್ ವಕೀಲರಾದ ಗೌರಿ ಕೆ. ಎಸ್ ಲಿಂಗತ್ವ ಅಲ್ಪಸಂಖ್ಯಾತರಿಗೆ ಇರುವ ಕಾನೂನು ಮತ್ತು ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

Also Read  ಉಪ್ಪಿನಂಗಡಿ: ಚಿನ್ನ ಖರೀದಿಗೆ ತೆರಳುತ್ತಿದ್ದ ವ್ಯಕ್ತಿಯಿಂದ 10 ಲ.ರೂ. ಕಳ್ಳತನ ➤ ಆರೋಪಿ ಅರೆಸ್ಟ್

Nk Cake House

ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅದ್ಯಕ್ಷ ರಾಘವೇಂದ್ರ ಎಚ್. ವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ. ಎಂ ವಂದಿಸಿದರು, ಶುಕರಾಜ್ ಎಸ್. ಕೋಟ್ಟಾರಿ ನಿರೂಪಿಸಿದರು.

error: Content is protected !!
Scroll to Top