ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ; 30 ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ. 20: ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿಯಾಗಿ 30 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹೊನ್ನಾವರ ಮುಗ್ವಾ ಅರೊಳ್ಳೀ ಕ್ರಾಸ್ ಬಳಿ ಗುರುವಾರ ಮಧ್ಯರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಾಲೂರು ಮಾಸ್ತಿಹಳ್ಳ ಪ್ರೌಢಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ ಕರ್ನಾಟಕ ಪ್ರೌಢಶಾಲಾ ವಿದ್ಯಾರ್ಥಿಗಳಿದ್ದ ಬಸ್‌ ವಾಪಸ್ಸಾಗುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

Nk Cake House

ಗಾಯಗೊಂಡ ವಿದ್ಯಾರ್ಥಿಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಮಣಿಪಾಲಕ್ಕೆ ಚಿಕಿತ್ಸೆಗಾಗಿ ಸಾಗಿಸಲಾಗಿದೆ. ಇತ್ತೀಚೆಗೆ ಕೋಲಾರದ ಮಕ್ಕಳು ಪ್ರವಾಸಕ್ಕೆ ಬಂದು ನಾಲ್ವರು ವಿದ್ಯಾರ್ಥಿನಿಯರು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದರು.

error: Content is protected !!
Scroll to Top