(ನ್ಯೂಸ್ ಕಡಬ) newskadaba.com ಡಿ. 20: ಬೆಂಗಳೂರು: ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿ ಬೇರೆ ಬೇರೆ ಠಾಣೆಗಳಿಗೆ ಕರೆದೊಯ್ದು ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಅವರ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ತಿಳಿಸಿದ್ದಾರೆ.
ಸಿ.ಟಿ.ರವಿ ಅವರು ಶಾಸಕರಾಗಿ, ಸಚಿವರಾಗಿ, ಪಕ್ಷದ ಹಿಂದಿನ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿಯಾಗಿ ಕೆಲಸ ಮಾಡಿದ್ದಾರೆ. ಅವರನ್ನು ಈ ರೀತಿ ನಡೆಸಿಕೊಂಡದ್ದು ಸರಿಯಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ. ಪೊಲೀಸ್ ಇಲಾಖೆ ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ. ಈ ರೀತಿ ರ‍್ತಿಸುವುದು ಸರಿಯಲ್ಲ. ಘಟನೆಯನ್ನು ತಿಳಿದುಕೊಂಡು ಕಾನೂನಿನಂತೆ ಕ್ರಮ ಕೈಗೊಳ್ಳಬೇಕಿತ್ತು ಎಂದು ಅವರು ಒತ್ತಾಯಿಸಿದರು.