(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲೇ ಮತ್ತೋರ್ವ ಬಾಣಂತಿ ಸಾವು ವರದಿಯಾಗಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಿಳೆ ಸಾವಿಗೆ ಖಾಸಗಿ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.