‘ಕಾಂಗ್ರೆಸ್‌ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು’- ಪ್ರಲ್ಹಾದ ಜೋಶಿ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಈಗಿನ ಕಾಂಗ್ರೆಸ್‌, ಮಹಾತ್ಮ ಗಾಂಧೀಜಿಗೂ ಏನು ಸಂಬಂಧ. ಈಗಿನದು ನಕಲಿ ಕಾಂಗ್ರೆಸ್, ಹಳೇ ಕಾಂಗ್ರೆಸ್ ತುಂಡು ತುಂಡಾಗಿ ಹೋಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು.

ಬೆಳಗಾವಿಯಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಶತಮಾನೋತ್ಸವದ ಕುರಿತು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು. ಅದು ಕಳ್ಳಕಾಕರ ಗುಂಪು. ಇವರ‍್ಯಾರು ಮಹಾತ್ಮ ಗಾಂಧೀಜಿ ಅವರ ಕಾಂಗ್ರೆಸ್ನ ವಾರಸುದಾರಲ್ಲ ಎಂದರು.

 

 

ವಿಧಾನ ಪರಿಷತ್ ಸದಸ್ಯ ಸಿ.ಟಿ. ಅವರನ್ನು ಕಾರಿನಲ್ಲಿ ಸುತ್ತಾಡಿಸಿದ್ದು ತನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ನೀಡುತ್ತಾರೆ. ಅಂದರೆ, ಗೃಹ ಸಚಿವರನ್ನೇ ಕತ್ತಲಲ್ಲಿ ಇಟ್ಟು ಪೊಲೀಸರು ಹೀಗೆ ಮಾಡಿದ್ದಾರಾ? ಜಿಲ್ಲಾ ಉಸ್ತುವಾರಿ ಸಚಿವರು ಸಹ ಪೊಲೀಸರು ತಪ್ಪು ಮಾಡಿದ್ದಾರೆ ಎಂದರು.

Also Read  ಪ್ರಧಾನಿ ಮೋದಿಗೆ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ ಡೊಮಿನಿಕಾ

Nk Cake HouseNk Cake House

error: Content is protected !!
Scroll to Top