‘ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಅರಿವಿದೆ’- ಡಿಕೆಶಿ

(ನ್ಯೂಸ್ ಕಡಬ) newskadaba.com ಡಿ. 24: ನವದೆಹಲಿ: ಕಾಂಗ್ರೆಸ್ ಶಕ್ತಿ ಏನೆಂಬುದು ನಮಗೂ ತಿಳಿದಿದೆ. ಅಷ್ಟೇ ಅಲ್ಲ ನಮಗಿಂತ ಚೆನ್ನಾಗಿ ಬಿಜೆಪಿಯವರಿಗೂ ಕಾಂಗ್ರೆಸ್ ಶಕ್ತಿಯ ಅರಿವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರೂ, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಬರಬೇಕು ಎಂದು ತಿಳಿಸಿದರು.

Also Read  ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

Nk Cake House

error: Content is protected !!
Scroll to Top