(ನ್ಯೂಸ್ ಕಡಬ) newskadaba.com ಡಿ. 25 ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಪುಷ್ಪ 2′ ಚಿತ್ರವು ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ನಡುವಿನ ಘರ್ಷಣೆಯ ಕಥೆಯಾಗಿದೆ. ಇವರಿಬ್ಬರು ಸದಾ ಕಿತ್ತಾಡಿಕೊಳ್ಳುತ್ತಾರೆ. ಇದೀಗ ಈ ಚಿತ್ರದಲ್ಲಿ ಪೊಲೀಸರಿಗೆ ಅವಮಾನ ಆಗಿದೆ ಎಂದು ಕಾಂಗ್ರೆಸ್ ನಾಯಕ ಧೀನ್ಮರ್ ಮಲ್ಲಣ್ಣ ಅವರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ಸ್ವಿಮ್ಮಿಂಗ್‌ಪೂಲ್‌ನಲ್ಲಿರುವಾಗ ಪುಷ್ಪರಾಜ್ ಮೂತ್ರ ಮಾಡುತ್ತಾನೆ. ಇದು ಪೊಲೀಸರಿಗೆ ಅವಮಾನ ಮಾಡುವಂಥದ್ದು ಎಂದು ಕಾಂಗ್ರೆಸ್ ನಾಯಕ ಅಭಿಪ್ರಾಯಪಟ್ಟಿದ್ದಾರೆ. ಕಾನೂನನ್ನು ಕಾಪಾಡುವರಿಗೆ ನೀಡುವ ಗೌರವ ಇದಲ್ಲ. ಹೀಗಾಗಿ, ಅವರು ಕೇಸ್ ದಾಖಲಿಸಿದ್ದು, ಅಲ್ಲು ಅರ್ಜುನ್‌ಗೆ ನೋಟಿಸ್ ಹೋಗಿದೆ ಎಂದು ಹೇಳಲಾಗಿದೆ.