(ನ್ಯೂಸ್ ಕಡಬ) newskadaba.com ಡಿ. 25 ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು ಎರಡು ಕೋಟಿಗೂ ಅಧಿಕ ಹಣ ಸಾಲ ಪಡೆದು ವಂಚಿಸಿರುವ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬ್ಕರ್ ಸಿದ್ದಿಕ್ ಇಲ್ಲಿನ ಮಂಗಳೂರು ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ.
ಈತ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಸಿದ್ದಿಕ್, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.