(ನ್ಯೂಸ್ ಕಡಬ) newskadaba.com ಡಿ.25 ಕುಂದಾಪುರ: ಗಡಿಕಾಯುವ ಸಂದರ್ಭ ರಸ್ತೆ ಅಪಘಾತವೊಂದರಲ್ಲಿ ಸೇನಾ ಟ್ರಕ್ ಪಲ್ಟಿಯಾಗಿ ಐದು ಜನ ಯೋಧರು ಸಾವನ್ನಪ್ಪಿದ ದುರಂತ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಐವರಲ್ಲಿ ಒಬ್ಬ ಯೋಧನನ್ನು ಕುಂದಾಪುರ ಬೀಜಾಡಿಯ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.
ವಿವಾಹಿತವಾಗಿರುವ ಅನೂಪ್ ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ಅನೂಪ್ ಅವರು ಪತ್ನಿ, ತಾಯಿ, ಇಬ್ಬರು ಸಹೋದರಿಯರು, ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾಳೆ ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗ್ರಾಮಸ್ಥರ ನೇತೃತ್ವದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗುತ್ತಿದೆ.