ಕುಂದಾಪುರ: ಹುಟ್ಟೂರಿಗೆ ತಲುಪಿದ “ಯೋಧ ಅನೂಪ್ ಪೂಜಾರಿ”ಯವರ ಪಾರ್ಥಿವ ಶರೀರ

(ನ್ಯೂಸ್ ಕಡಬ)com ಡಿ. 26 ಕುಂದಾಪುರ: ಜಮ್ಮು-ಕಾಶ್ಮೀರದಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರವು ಇಂದು ಅವರ ಹುಟ್ಟೂರಿಗೆ ತಲುಪಿದೆ.

Nk Cake House

ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆ ಮಾಡಲಾಯಿತು. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯಲಿದೆ. ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗುವ ನಿರೀಕ್ಷೆ ಇದೆ. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು.

Also Read  ಫೆ. 22(ನಾಳೆಯಿಂದ) ಮಂಗಳೂರು-ಪಣಜಿಗೆ ರಾಜಹಂಸ ಬಸ್ ಸೇವೆ ಪ್ರಾರಂಭ

ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆಯಲಿದ್ದು, ಕುಟುಂಬದ ಆಪ್ತರಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೀಜಾಡಿಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಆಪ್ತರು, ಸಾರ್ವಜನಿಕರು, ಜನಪ್ರತಿನಿಧಿಗಳಿಗೆ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

error: Content is protected !!
Scroll to Top