(ನ್ಯೂಸ್ ಕಡಬ) newskadaba.com ಕಡಬ, ಡಿ.27. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ (ಡಿಸೆಂಬರ್ 28) ಶನಿವಾರದಂದು ನಡೆಯಬೇಕಾಗಿದ್ದ ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಮಹೋತ್ಸವ ಸಂಭ್ರಮವನ್ನು ಮುಂದೂಡಲಾಗಿದೆ.
ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಇರುವುದರಿಂದ 2025 ಜನವರಿ 04 ಶನಿವಾರ ಸಂಜೆ ಕಾರ್ಯಕ್ರಮವು ಯಥಾಸ್ಥಿತಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಸಹಕರಿಸುವಂತೆ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.