ಅರಣ್ಯ ಅಪರಾಧ ತಡೆಗೆ ‘ಗರುಡಾಕ್ಷಿ’ ಆನ್‌ಲೈನ್‌ FIR ವ್ಯವಸ್ಥೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಅರಣ್ಯ ಇಲಾಖೆ (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್‌, ಡಿಜಿಟಲ್ FIR ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಂಗಳವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದರು.

Also Read  ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Nk Cake House

ತಾವು ಅರಣ್ಯ ಸಚಿವರಾದ ಬಳಿಕ ಇಲಾಖೆಯಲ್ಲಿ ಹಂತ ಹಂತವಾಗಿ ಸುಧಾರಣೆ ತರುತ್ತಿದ್ದು, ಪೊಲೀಸ್ ಇಲಾಖೆಯಲ್ಲಿ ಇರುವ ರೀತಿಯಲ್ಲೇ ಅರಣ್ಯ ಇಲಾಖೆಯ್ಲೂ ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಜಾರಿಗೆ ತರಲು ತಂತ್ರಾಂಶ ರೂಪಿಸುವಂತೆ 2023ರಲ್ಲಿಯೇ ಸೂಚನೆ ನೀಡಿದ್ದೆ, ಇಂದು ಅದು ಕಾರ್ಯರೂಪಕ್ಕೆ ಬಂದಿದೆ. ಈ ತಂತ್ರಾಂಶ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

error: Content is protected !!
Scroll to Top