ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಗೌರವಧನ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ; ಏ.1ರಿಂದ ಜಾರಿ

(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: ಆಶಾ ಕಾರ್ಯಕರ್ತೆಯರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ 1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ. ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.

ಪೋರ್ಟಲ್ ಸುಧಾರಣೆಗೆ ಸೂಚನೆ
ಮಾಹಿತಿಯನ್ನು ಪೋರ್ಟಲ್‌ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

Also Read  ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಗೌರವಧನ ನಿಲ್ಲಿಸದೆ ರಜೆ
ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

error: Content is protected !!
Scroll to Top