ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಜ.11ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕ್ಷಮೆ ಯಾಚಿಸದಿದ್ದರೆ ಕೊಲೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ.

Nk Cake House

‘ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ’ ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ಮನೆಗೆ ಬಂದಿದೆ. ಈ ಸಂಬಂಧ ಸಿಟಿ ರವಿ ಅವರು ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿ, ಅಪರಿಚಿತ ವ್ಯಕ್ತಿಗಳಿಂದ ಎಂಎಲ್‌ಸಿ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದರು. 15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ ಹುಷಾರಾಗಿ ಇರಿ ಎಂದು ಬೆದರಿಕೆ ಪತ್ರದಲ್ಲಿ ಉಲ್ಲೇಖವಾಗಿದೆ.

error: Content is protected !!
Scroll to Top