ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 12. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ ಒಕ್ಕೂಟ ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದೇಂತಡ್ಕದ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದ ಸುತ್ತ ಸ್ವಚ್ಛತೆಯನ್ನು ಯೋಜನೆಯ 75 ಸದಸ್ಯರು ಸೇರಿ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರಾದ ಜೆ ಶಂಕರ್ ಭಟ್, ವಸಂತ್ ಕುಮಾರ್ ಅಮೈ, ಜೆ.ಶ್ಯಾಮ್ ನಾರಾಯಣ್, ಜೆ.ರಾಮಕೃಷ್ಣ ಭಟ್, ಕೃಷ್ಣಾನಂದ ಬರೆಂಗಾಯಿ, ರಘು ಅಜಿಲ ಮಿತ್ತಿಲ, ಸತೀಶ್ ಮುರುವ, ಮೋಹನ ಕಜೆ, ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಾ ಹಾಗೂ ಕೆದಿಲ ‘B’ ಒಕ್ಕೂಟದ ಸೇವಾಪ್ರತಿನಿಧಿ ಜಯಂತಿ ಮೊದಲಾದವರು ಉಪಸ್ಥಿತರಿದ್ದರು.

error: Content is protected !!
Scroll to Top