ಬೆಂಗಳೂರಿನಲ್ಲಿ ಸಿಲಿಂಡರ್‌ ಸ್ಫೋಟ, 7 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ರಾಜಧಾನಿಯ ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಲಿಂಡರ್‌ ಸ್ಫೋಟದಿಂದ ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆ ಶೋಭ (60) ಮತ್ತು ಕರೀಬುಲ್ಲ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ದಿಜುಧಾರ್​ ಎಂಬವರ ಮನೆಯಲ್ಲಿ ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಎದುರು ಮನೆಯವರಿಗೂ ಗಾಯವಾಗಿದೆ.

Nk Cake House

ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗಸಂದ್ರದಲ್ಲಿನ ಆರ್​.ಎ ಫ್ಯಾಷನ್ ಗಾರ್ಮೆಂಟ್ಸ್​ನಲ್ಲಿ​​ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದೆ. 40 ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ಬಟ್ಟೆ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮವಾಗಿವೆ. R.A.ಫ್ಯಾಷನ್ ಗಾರ್ಮೆಂಟ್ಸ್​​ ಅರುಣ್ ಮತ್ತು ಶಿವು ಎಂಬುವರಿಗೆ ಸೇರಿದೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ ಅಮಾನತು ಆದೇಶ ಹಿಂಪಡೆದ ಸರ್ಕಾರ

error: Content is protected !!
Scroll to Top