ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ!

(ನ್ಯೂಸ್ ಕಡಬ) newskadaba.com ಜ.14 ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ  ಜಿಲ್ಲೆಯ ‌ಕಿತ್ತೂರು ಬಳಿ ಇಂದು(ಮಂಗಳವಾರ) ನಡೆದಿದೆ. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

Nk Cake House

ಕಾರು ಮರಕ್ಕೆ ಡಿಕ್ಕಿ ಹೊಡೆದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ  ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also Read  ಅರ್ಜೆಂಟೀನಾ ನಾಪತ್ತೆಯಾಗಿದ್ದ ವ್ಯಕ್ತಿ ಶಾರ್ಕ್ ಹೊಟ್ಟೆಯೊಳಗೆ ಪತ್ತೆ..!

 

error: Content is protected !!