6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nk Cake House

ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು.

ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕನನ್ನು ಬಂಧಿಸಿದ್ದಾರೆ.

Also Read  ಅತ್ಯಾಚಾರ ಆರೋಪ ಪ್ರಕರಣ - ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ

error: Content is protected !!
Scroll to Top