NewsKadaba Team

ರಹೀಂ ಕೊಳತ್ತಮಜಲು ಮನೆಗೆ ಸ್ಪೀಕರ್ ಯುಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskafaba.com ಬಂಟ್ವಾಳ, ಜೂ. 11. ಇತ್ತೀಚೆಗೆ ಹತ್ಯೆಗೀಡಾದ ಕೊಳತ್ತಮಜಲು ಅಬ್ದುಲ್ ರಹೀಂ ಮನೆಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭ ರಹೀಂ ಸಹೋದರ ಮಾತನಾಡಿ, ನನ್ನ ತಮ್ಮ ಅಮಾಯಕ, ನಾವು ಊರಿನಲ್ಲಿ ಹಿಂದೂ ಮುಸ್ಲಿಮ್ ಅಣ್ಣ ತಮ್ಮ ರೀತಿಯಲ್ಲಿ ಇದ್ದೇವೆ. ನನ್ನ ತಮ್ಮನನ್ನು ವಿನಾ ಕಾರಣ ಹತ್ಯೆ ಮಾಡಿದ್ದಾರೆ. ನಮಗೆ ನ್ಯಾಯ ಸಿಗಬೇಕು, ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಈ ಪ್ರಕರಣದಲ್ಲಿ 7, 8 […]

ರಹೀಂ ಕೊಳತ್ತಮಜಲು ಮನೆಗೆ ಸ್ಪೀಕರ್ ಯುಟಿ ಖಾದರ್ ಭೇಟಿ Read More »

ಕರಾವಳಿ

ಪಾಣೆಮಂಗಳೂರು ಹಳೇ ಸೇತುವೆಯಲ್ಲಿ ಸಂಚಾರ ನಿರ್ಬಂಧ ತಹಶೀಲ್ದಾರ್ ಆದೇಶ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 11. ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಎಂದು ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ವರದಿಯ ಪ್ರಕಾರ, ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದಲ್ಲಿರುವ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಳೆಯ ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು, ಸೇತುವೆಯಲ್ಲಿ ಈ ಹಿಂದೆ ಬಿರುಕು ಬಂದ ಹಿನ್ನೆಲೆ ಸೇತುವೆಯ ಮೇಲೆ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಕಬ್ಬಿಣದ ಕಮಾನು ಅಳವಡಿಸಿ ಬಂದ್ ಮಾಡಲಾಗಿತ್ತು. ಪ್ರಸ್ತುತ ಕಬ್ಬಿಣದ ಕಮಾನನ್ನು ಹಾನಿಗೊಳಿಸಿ ಘನವಾಹನಗಳು ಸಂಚರಿಸುತ್ತಿರುವುದು

ಪಾಣೆಮಂಗಳೂರು ಹಳೇ ಸೇತುವೆಯಲ್ಲಿ ಸಂಚಾರ ನಿರ್ಬಂಧ ತಹಶೀಲ್ದಾರ್ ಆದೇಶ Read More »

ಕರಾವಳಿ

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ ವಿಟ್ಲ ಪಿಎಸ್ಐ ಸಸ್ಪೆಂಡ್

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 11. ಜುಗಾರಿ ಅಡ್ಡೆಗೆ ದಾಳಿ ನಡೆಸಿದ ವಿಚಾರದಲ್ಲಿ ಹಣ ಬೇಡಿಕೆ ಒಡ್ಡಿದ ಆರೋಪದಡಿ ವಿಟ್ಲ ಎಸೈ ಕೌಶಿಕ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ವರದಿಯ ಪ್ರಕಾರ ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಸ್ಥಳಕ್ಕೆ ವಿಟ್ಲ ಪಿಎಸ್ಐ ಕೌಶಿಕ್ ರವರು ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದೇ ಇದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಪತ್ತೆಯಾಗಿತ್ತು.

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ ವಿಟ್ಲ ಪಿಎಸ್ಐ ಸಸ್ಪೆಂಡ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 11. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ಪರಾರಿಯಾಗಿದ್ದ ವಾರಂಟ್ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಹೊಸಬೆಟ್ಟುವಿನ ಸಿದ್ದೀಕ್ ಸಾರಿಕ್ ಫರ್ಹಾನ್ ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಲಾಕಪ್ ನಿಂದ ಪರಾರಿಯಾಗಿದ್ದ ಈತ ಮುಂಬೈಗೆ ಪರಾರಿಯಾಗಿರುವುದಾಗಿ ಪ್ರಚಾರವಾಗಿತ್ತು.  ಆದರೆ ಪೊಲೀಸರು ಆರೋಪಿ ಮಂಜೇಶ್ವರ ಪರಿಸರದಲ್ಲೇ ಇರುವ ಬಗ್ಗೆ ಮಾಹಿತಿ ಪಡೆದು ತನಿಖೆ ಚುರುಕುಗೊಳಿಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ತವ್ಯಕ್ಕೆ ಅಡ್ಡಿ- ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 11. ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ‌ ಶಾಸಕ ಮೊಯ್ದೀನ್ ಬಾವಾ ಮತ್ತು ಅವರ ಸಹಚರರ ವಿರುದ್ದ ಪ್ರಕರಣ ದಾಖಲಾದ ಕುರಿತು ವರದಿಯಾಗಿದೆ. ಮಾಜಿ ಶಾಸಕ ಮೊಯಿದ್ದೀನ್ ಬಾವಾರವರು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತಾಗಿ ಎನ್ಎಂಪಿಎ ಕಛೇರಿಯ ಡೆಪ್ಯೂಟಿ ಚೇರ್ ಪರ್ಸನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು

ಕರ್ತವ್ಯಕ್ಕೆ ಅಡ್ಡಿ- ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ದ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು..!

(ನ್ಯೂಸ್ ಕಡಬ) newskadaba.com ಜೂ. 11. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.   ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ. ಅರ್ಜಿಯ ವಾದಗಳನ್ನು ಮಂಗಳವಾರದಂದು ಆಲಿಸಿದ್ದ ಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೆ.ಲಕ್ಷ್ಮಣ್ ಅವರು ಸಿಬಿಐ ನ್ಯಾಯಾಲಯದ ತೀರ್ಪನ್ನು ತಾತ್ಕಾಲಿಕವಾಗಿ ತಡೆಹಿಡಿದು ತೀರ್ಪು

ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಅನನ್ಯಾ ರಾವ್ ಭಾರತೀಯ ನೌಕಾ ಪಡೆಯ ಸಬ್ ಲೆಫ್ಟಿನೆಂಟ್ ಆಗಿ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು ಜೂ. 11. ನಗರದ ಲ್ಯಾಂಡ್ ಲಿಂಕ್ಸ್‌ ನಿವಾಸಿ ಹಾಗೂ ನಿವೃತ್ತ ಟೆಲಿಕಾಂ ಉದ್ಯೋಗಿ ಸತೀಶ್ ರಾವ್ ಮತ್ತು ವೀಣಾ ದಂಪತಿಯ ಪುತ್ರಿ ಅನನ್ಯಾ ರಾವ್ ಅವರು ಭಾರತೀಯ ನೌಕಾ ಪಡೆಯ ಸಬ್‌ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾರೆ. ಅನನ್ಯಾ ಅವರು ಮೇ 31ರಂದು ಇಂಡಿಯನ್ ನೇವಲ್ ಅಕಾಡೆಮಿ ಎಝಿಮಾಲದಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಕಮೀಷನ್ಸ್ ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಇವರು ತಮ್ಮ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿಪೂರ್ವ ಶಿಕ್ಷಣದವರೆಗೆ ಮಂಗಳೂರಿನಲ್ಲಿ ಪೂರೈಸಿದ್ದು, ನಂತರ ಸುರತ್ಕಲ್‌ ನ

ಮಂಗಳೂರಿನ ಅನನ್ಯಾ ರಾವ್ ಭಾರತೀಯ ನೌಕಾ ಪಡೆಯ ಸಬ್ ಲೆಫ್ಟಿನೆಂಟ್ ಆಗಿ ನೇಮಕ Read More »

ಕರ್ನಾಟಕ

ಅನ್ನಭಾಗ್ಯದ ಅಕ್ಕಿ ದಾಸ್ತಾನು ಪತ್ತೆ- 56 ಕ್ವಿಂಟಾಲ್ ಅಕ್ಕಿ ಸಹಿತ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಸರಕಾರದ ಉಚಿತ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಆರೋಪದಡಿ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಹಿರಿಯಡ್ಕದ ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿ ನಡೆದಿದೆ. ಬಂಧಿತನನ್ನು ವಾಸುದೇವ ಪ್ರಭು ಎಂದು ಗುರುತಿಸಲಾಗಿದೆ. ಆರೋಪಿಯು ತನಗೆ ಸೇರಿದ ಜನರಲ್ ಸ್ಟೋರ್ ಒಂದರಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಆಹಾರ

ಅನ್ನಭಾಗ್ಯದ ಅಕ್ಕಿ ದಾಸ್ತಾನು ಪತ್ತೆ- 56 ಕ್ವಿಂಟಾಲ್ ಅಕ್ಕಿ ಸಹಿತ ಆರೋಪಿ ವಶಕ್ಕೆ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಜೂನ್ 12 ಮತ್ತು 13ರಂದು ಭಾರೀ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಹವಾಮಾನ ಇಲಾಖೆಯ ವರದಿ ಪ್ರಕಾರ ಜೂನ್ 12 ಮತ್ತು ಜೂನ್ 13ರಂದು ರಾಜ್ಯ ರಾಜಧಾನಿ ಸೇರಿದಂತೆ ಸುಮಾರು 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲಾ ಜಿಲ್ಲೆಗಳಿಗೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ. ಉಳಿದ

ರಾಜ್ಯದಲ್ಲಿ ಜೂನ್ 12 ಮತ್ತು 13ರಂದು ಭಾರೀ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಅವರು ಬುಧವಾರದಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶ ವಿ.ಕಾಮೇಶ್ವರ ರಾವ್, ಇಂಧನ ಸಚಿವ ಕೆ.ಜೆ.ಜಾರ್ಜ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಬ್ಬಂದಿಗಳು ಮತ್ತು ಆಡಳಿತ ಸುಧಾರಣಾ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ
Scroll to Top