NewsKadaba Team

ಕರ್ನಾಟಕ ಕಬಡ್ಡಿ ತಂಡಕ್ಕೆ ಕಡಬದ ಝಮೀರ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಕರ್ನಾಟಕ ಕಬಡ್ಡಿ ತಂಡಕ್ಕೆ ಕಡಬ ತಾಲೂಕಿನ ಕೊಯಿಲದ ನಿವಾಸಿ ಝಮೀರ್ ಆಯ್ಕೆಯಾಗಿದ್ದು, 2 ದಿನಗಳ ಹಿಂದೆ ಆಂಧ್ರಪ್ರದೇಶದ ಮಚಲೀಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೀಚ್ ಕಬಡ್ಡಿಯಲ್ಲಿ ಆಟವಾಡಿ ಉತ್ತಮ ಪ್ರದರ್ಶನ ತೋರಿದ್ದಾರೆ. ಝಮೀರ್ ಅವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ದ್ವಿತೀಯ ವರ್ಷದ ಬಿ.ಎ. ತರಗತಿ ವಿದ್ಯಾರ್ಥಿಯಾಗಿರುತ್ತಾರೆ. ಝಮೀರ್ ತನ್ನ ಪ್ರಾಥಮಿಕ ಶಿಕ್ಷಣವನ್ನು ಆತೂರು ಬದ್ರಿಯಾ ಸ್ಕೂಲ್ ನಲ್ಲಿ ಮುಗಿಸಿ, ಪ್ರೌಢ ಶಿಕ್ಷಣವನ್ನು ಕಡಬದ ಸೈಂಟ್ ಜೋಕಿಮ್ ಪ್ರೌಢ ಶಾಲೆಯಲ್ಲಿ, […]

ಕರ್ನಾಟಕ ಕಬಡ್ಡಿ ತಂಡಕ್ಕೆ ಕಡಬದ ಝಮೀರ್ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳದ ರೈಲ್ವೆ ಹಳಿ ಸಮೀಪ ಅಣ್ಣನನ್ನು ತಮ್ಮನೇ ಮೈಮೇಲೆ ಡೀಸೆಲ್ ಮಿಶ್ರಿತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹನುಮಪ್ಪ (42) ಎಂಬವರು ಆಸ್ಪತ್ರೆಯಲ್ಲಿ ಸೋಮವಾರದಂದು ಕೊನೆಯುಸಿರೆಳೆದಿದ್ದಾರೆ. ವರದಿಗಳ ಪ್ರಕಾರ, ಆರೋಪಿ ನಿಂಗಪ್ಪ (21) ತನ್ನ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಆರಂಭದಲ್ಲಿ ಕೊಲೆ ಯತ್ನ ಪ್ರಕರಣ ಎಂದು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ

ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಜೂ. 11. ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಮಹಿಳೆಯೊಬ್ಬಳು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಹಲ್ಲೆ ಮಾಡಿದ ಘಟನೆ ಕುಂದಾಪುರದ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್‌ ಶಾಪ್‌ ನಲ್ಲಿ ನಡೆದಿದೆ.   ಹಲ್ಲೆಗೊಳಗಾದ ಯುವತಿಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಯಾಸ್ಮಿನ್‌ ಹಲ್ಲೆಗೈದ ಆರೋಪಿಯಾಗಿದ್ದು, ಈಕೆ ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದು ಔಷಧ ಖರೀದಿಸಿ 500ರ ನೋಟು ಕೊಟ್ಟಿದ್ದಳು. ಈ ವೇಳೆ ಯುವತಿ ಚಿಲ್ಲರೆ ಇಲ್ಲ ಎಂದಾಗ ಯಾಸ್ಮಿನ್‌ ಅದೇ ವಿಚಾರಕ್ಕೆ ಯುವತಿಯ ಮೇಲೆ

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಪರಸ್ಪರ ದ್ವೇಷ, ಕಾಳಗ- ಸೂಕ್ತ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಜೂ. 11. ಸ್ಥಳೀಯರು, ವಲಸಿಗರು ಎಂದು ಗುಂಪುಕಟ್ಟಿಕೊಂಡು ಬೀದಿ ಕಾಳಗ ನಡೆಸಿದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಕೆಳದಿನಗಳಿಂದ ಪರಸ್ಪರ ದ್ವೇಷಿಸುತ್ತಿದ್ದ ಯುವಕರ ತಂಡಗಳು ನಿನ್ನೆ ರಾತ್ರಿ ಬ್ಯಾಟ್ ನಿಂದ ಪರಸ್ಪರ ಥಳಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಯುವಕರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಪರಸ್ಪರ ದ್ವೇಷ, ಕಾಳಗ- ಸೂಕ್ತ ಕ್ರಮಕ್ಕೆ ಆಗ್ರಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ- ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ ಘಟನೆ ನಡೆದಿದೆ. ದಾಳಿ ವೇಳೆ ಕೃತ್ಯದಲ್ಲಿ ತೊಡಗಿದ್ದ 8 ಮಂದಿ ಪರಾರಿಯಾಗಿದ್ದು, 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ 3,560

ಕಡಬ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ- ಮೂವರು ವಶಕ್ಕೆ Read More »

ಕರಾವಳಿ

ಮಂಗಳೂರು ಏರ್‌ಪೋರ್ಟ್‌ ಸಂಪರ್ಕಿಸುವ ಮರವೂರು ಸೇತುವೆ-ಮರಕಡ ರಸ್ತೆ ಅಗಲೀಕರಣ, ತುರ್ತು ರಿಪೇರಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ದಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳೂರು ನಗರದಿಂದ ಏರ್ ಪೋರ್ಟ್ ಗೆ ಸಂಪರ್ಕಿಸುವ ಮುಖ್ಯರಸ್ತೆಯು ಮರಕಡದವರೆಗೆ ಈಗಾಗಲೇ ಚತುಷ್ಪಥ ರಸ್ತೆಯಾಗಿ ಅಭಿವೃದ್ದಿಯಾಗಿದೆ. ಆದರೆ ಅಲ್ಲಿಂದ ಮುಂದಕ್ಕೆ

ಮಂಗಳೂರು ಏರ್‌ಪೋರ್ಟ್‌ ಸಂಪರ್ಕಿಸುವ ಮರವೂರು ಸೇತುವೆ-ಮರಕಡ ರಸ್ತೆ ಅಗಲೀಕರಣ, ತುರ್ತು ರಿಪೇರಿಗೆ ಆಗ್ರಹ Read More »

ಕರಾವಳಿ, ಕರ್ನಾಟಕ

ಮರಗಳ ತೆರವು: ಜೂನ್ 17 ರಂದು ಅಹವಾಲು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಬೆಳ್ತಂಗಡಿ ತಾಲೂಕು ಕಸಬಾ ಗ್ರಾಮದ ಬೆಳ್ತಂಗಡಿ ತಾಲೂಕಿನ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಕಾದಿರಿಸಿದ ಜಮೀನಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಚಣೆಯಾಗಿರುವ 50ಕ್ಕಿಂತ ಹೆಚ್ಚು ಮರಗಳನ್ನು ಗುರುತಿಸಿದ್ದು, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ನಿಯಮಗಳನ್ವಯ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಜೂನ್ 17ರಂದು  ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ ಕಛೇರಿ

ಮರಗಳ ತೆರವು: ಜೂನ್ 17 ರಂದು ಅಹವಾಲು ಸಭೆ Read More »

ಕರಾವಳಿ, ಕರ್ನಾಟಕ

ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿನ ಎಲ್ಲಾ ಹೊರಗುತ್ತಿಗೆ ನಾನ್ ಕ್ಲಿನಿಕ್ ಹಾಗೂ ಗ್ರೂಪ್ ಡಿ ನೌಕರರಿಗೆ ಜೂನ್ 9 ರಂದು ಒಂದು ತಿಂಗಳ ವೇತನವನ್ನು ಪಾವತಿ ಮಾಡಲಾಗಿದ್ದು, ಹೊರಗುತ್ತಿಗೆ ನಾನ್ ಕ್ಲಿನಿಕ್ ಹಾಗೂ ಗ್ರೂಪ್ ಡಿ ನೌಕರರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ. ಗ್ರೂಪ್ ಡಿ ನೌಕಕರರ ವೇತನಕ್ಕೆ ಸಂಬಂಧಿಸಿದಂತೆ ರಾಜ್ಯವಲಯದಿಂದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ನೌಕರರಿಗೆ ಹಿಂಬಾಕಿ ಮಾಡದೇ ಒಂದು ವಾರದೊಳಗೆ ವೇತನ ಪಾವತಿಸಲು

ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿ Read More »

ಕರಾವಳಿ, ಕರ್ನಾಟಕ

ಟ್ರೇಡ್ ಲೈಸೆನ್ಸ್ ನವೀಕರಿಸಲು ನಗರಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡ್‍ ಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕಾಗಿದ್ದು, ಆನ್‍ ಲೈನ್ ತಂತ್ರಾಶದ ಮುಖಾಂತರ ಹೊಸ ಉದ್ದಿಮೆದಾರರು ಅರ್ಜಿಯನ್ನು ಸಲ್ಲಿಸಿ ಉದ್ದಿಮೆ ಪರವಾನಿಗೆ ಪಡೆಯುವುದು ಅತ್ಯವಶ್ಯಕವಾಗಿದೆ. ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಈ ಹಿಂದಿನ ಆರ್ಥಿಕ ವರ್ಷದಲ್ಲಿ ಪಡೆದುಕೊಂಡಿರುವ ಉದ್ದಿಮೆ ಪರವಾನಿಗೆ ನವೀಕರಿಸದೇ ಇದ್ದಲ್ಲಿ ಹಿಂದಿನ ಬಾಕಿಯನ್ನು ಹಾಗೂ ನವೀಕರಣ ಶುಲ್ಕವನ್ನು ಆನ್‍ ಲೈನ್‍ನಲ್ಲಿ ಈ ಕೂಡಲೇ ಪಾವತಿಸುವಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಪಾಲಿಕೆಯ ಆರೋಗ್ಯ

ಟ್ರೇಡ್ ಲೈಸೆನ್ಸ್ ನವೀಕರಿಸಲು ನಗರಪಾಲಿಕೆ ಸೂಚನೆ Read More »

ಕರಾವಳಿ, ಕರ್ನಾಟಕ

ಜೂನ್ 23 ರಂದು ತ್ರೈಮಾಸಿಕ ಕೆ.ಡಿ.ಪಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. 2025-26ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಜೂನ್ 23 ರಂದು ಬೆಳಿಗ್ಗೆ 10.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜೂನ್ 23 ರಂದು ತ್ರೈಮಾಸಿಕ ಕೆ.ಡಿ.ಪಿ ಸಭೆ Read More »

ಕರಾವಳಿ
Scroll to Top