NewsKadaba Team

ನಾಳೆ(ಜೂನ್ 12) ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಪ್ರಯುಕ್ತ ಬೆಳಿಗ್ಗೆ 9:30 ಗಂಟೆಗೆ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು […]

ನಾಳೆ(ಜೂನ್ 12) ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ Read More »

ಕರಾವಳಿ

ಬಸದಿ, ಸಿಖ್ ಗುರುದ್ವಾರ ಅರ್ಚಕರಿಗೆ ಗೌರವಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವಧನ ನೀಡಲು ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ದಕ್ಷಿಣ ಕನ್ನಡ ಜಿಲ್ಲೆಯ ಜೈನ್ ಬಸದಿಗಳು ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಾಣಿ ಕಾಯ್ದೆಯನ್ವಯ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆಯಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ.6000 ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ ರೂ.5000 ಮಾಸಿಕ ಗೌರವಧನ ನೀಡಲಾಗುತ್ತದೆ. ಸಲ್ಲಿಸಬೇಕಾದ

ಬಸದಿ, ಸಿಖ್ ಗುರುದ್ವಾರ ಅರ್ಚಕರಿಗೆ ಗೌರವಧನ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಸೂಚಿಸಿದ್ದಾರೆ. ಅವರು ಮಂಗಳವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭೂಕುಸಿತ, ನೀರು ಮುಳುಗಡೆ, ಸೇರಿದಂತೆ ತೀವ್ರ ಮಳೆಯಿಂದಾಗಿ ದುರಂತ ಘಟನೆಗಳು ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಜೂನ್ 13 ರಂದು ಉಸ್ತುವಾರಿ ಸಚಿವರಿಂದ ಜಿಲ್ಲೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜೂನ್ 13 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 7:25- ಸರ್ಕ್ಯೂಟ್ ಹೌಸ್, 9 ಗಂಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 12:4ಕ್ಕೆ ವಿಮಾನ ನಿಲ್ದಾಣದಿಂದ ಹೈದರಾಬಾದ್‍ ಗೆ ನಿರ್ಗಮಿಸಲಿದ್ದಾರೆ.

ಜೂನ್ 13 ರಂದು ಉಸ್ತುವಾರಿ ಸಚಿವರಿಂದ ಜಿಲ್ಲೆ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಸಂಸ್ಥೆಯ ಆವರಣದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸಂಧ್ಯಾ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭೂಮಿಯ ಮೇಲಿನ ಜೀವ ವೈವಿಧ್ಯವನ್ನು ರಕ್ಷಿಸಲು ಪರಿಸರ ಪರಿಪೂರ್ಣವಾಗಿ ನಿರ್ಮಾಣಗೊಂಡಿದೆ; ಇಂದು ಮನುಷ್ಯನ ಸ್ವಾರ್ಥ, ದುರಾಸೆಯಿಂದಾಗಿ ಪರಿಸರ ಅಸಮತೋಲನಗೊಂಡಿದೆ. ಜೀವವೈವಿಧ್ಯವನ್ನು, ಸಸ್ಯ ವೈವಿಧ್ಯವನ್ನು ಕಾಪಾಡಿಕೊಂಡು ಹೋಗುವ ದೃಢವಾದ ನಿರ್ಧಾರವನ್ನು

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11.  ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕ್ಯಾ. ಚೌಟ, ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ಕಾಲ್ತುಳಿತ ಪ್ರಕರಣ- ಮೃತ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರಿಸಿದ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಜೂ. 10. ಐಪಿಎಲ್ ನಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡ ಆರ್ ಸಿಬಿ ತಂಡದ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೊಳಗಾಗಿ ಜೀವ ಕಳೆದುಕೊಂಡಿರುವ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಸರ್ಕಾರ ಪರಿಹಾರದ ಚೆಕ್ ನ್ನು ಜಿಲ್ಲಾಧಿಕಾರಿಗಳು ಹಸ್ತಾಂತರ ಮಾಡಿದ್ದಾರೆ. ಸರ್ಕಾರದ ಪರಿಹಾರ ಸ್ವೀಕರಿಸಿ ಮಾತನಾಡಿದ ಚಿನ್ಮಯಿ ಶಟ್ಟಿ ತಂದೆ ಕರುಣಾಕರ ಶೆಟ್ಟಿ, ನಾವು ಮಗಳನ್ನು ಕಳೆದುಕೊಂಡಿದ್ದೇವೆ. ಈ ನೋವು ನಮಗೆ ನಿರಂತರ. ಈ ದುರ್ಘಟನೆಗೆ ಸರ್ಕಾರವೇ ನೇರ ಹೊಣೆ. ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ಮಾಡಿಸಿ ಸಾವು

ಕಾಲ್ತುಳಿತ ಪ್ರಕರಣ- ಮೃತ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರಿಸಿದ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಕಾಲ್ತುಳಿತ ಪ್ರಕರಣ- ಜೂನ್ 12ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಜೂ. 10. ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಳ್ಳಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ನಡೆಯಿತು. ಘಟನೆಗೆ ಸಂಬಂಧಪಟ್ಟಂತೆ ವಸ್ತುಸ್ಥಿತಿ ವರದಿಯನ್ನು ಜೂ. 12ರಂದು ಮುಚ್ಚಿದ ಲಕೊಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ. ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ನಮ್ಮ ಪ್ರತಿಕ್ರಿಯೆಯನ್ನು ನಾವಿನ್ನೂ

ಕಾಲ್ತುಳಿತ ಪ್ರಕರಣ- ಜೂನ್ 12ಕ್ಕೆ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿಗೆ ಬಂತಾ ಗುಲಾಬಿ ಬಣ್ಣದ ಸೀಯಾಳ..? ಪೋಸ್ಟ್ ವೈರಲ್

(ನ್ಯೂಸ್ ಕಡಬ) newskadaba.com ಜೂ. 10. ಬಹುತೇಕ ಜನರ ನೆಚ್ಚಿನ ಪಾನೀಯಗಳಲ್ಲಿ ಒಂದಾದ ಎಳನೀರನ್ನು ಯಾವುದೇ ಋತುಮಾನವಿರಲಿ, ಜನರು ತಪ್ಪದೇ ಸೇವಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ತೆಂಗಿನಕಾಯಿ ಇಳುವರಿಯೂ ಕುಸಿದಿದ್ದು, ಇದರಿಂದಾಗಿ ಎಳನೀರು ಬೆಲೆ ಗಗನಕ್ಕೆ ಏರಲು ಕಾರಣವಾಗಿದೆ. ಹೀಗಾಗಿ ಎಳನೀರನ್ನು ಅನಿವಾರ್ಯವಾಗಿ ಕೇಳಿದಷ್ಟು ಹಣ ನೀಡಿ ಖರೀದಿಸುವಂತಾಗಿದೆ. ಆದರೆ ಇದೀಗ ವೈರಲ್ ಆಗಿರುವ ಪೋಸ್ಟ್‌ ಒಂದರಲ್ಲಿ ಮಂಗಳೂರಿಗೆ ನೋಡಲು ಆಕರ್ಷಕವಾಗಿರುವ ಗುಲಾಬಿ ಬಣ್ಣದ ಇಂಡೋನೇಷ್ಯಾದ ಎಳನೀರು ಬಂದಿದೆ ಎನ್ನಲಾಗಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇದು

ಮಂಗಳೂರಿಗೆ ಬಂತಾ ಗುಲಾಬಿ ಬಣ್ಣದ ಸೀಯಾಳ..? ಪೋಸ್ಟ್ ವೈರಲ್ Read More »

ಕರಾವಳಿ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ
Scroll to Top