NewsKadaba Team

ವಿವಿಧ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಅ.29. ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಯವರು ಮಂಗಳೂರಿನಲ್ಲಿರುವ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿನ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನೆ ವೇಳೆ ಕಚೇರಿ ನಿರ್ವಹಣೆಯಲ್ಲಿ ಮತ್ತು ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದು ಈ ಬಗ್ಗೆ  ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ಮಾಹಿತಿ ನೀಡಲಾಗುವುದು ಎಂದು ಮಂಗಳೂರು ವಿಭಾಗ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ […]

ವಿವಿಧ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ Read More »

ಕರಾವಳಿ

ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.29. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್ ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ ನ ಎರಡನೇ ಮಹಡಿಯಲ್ಲಿರುವ

ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

(ನ್ಯೂಸ್ ಕಡಬ) newskadaba.com ಅ.29. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವು ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ವೆನ್‍ ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ Read More »

ಕರಾವಳಿ

ಕಾರ್ಮಿಕರ ಕಾನೂನು ಅರಿವು: ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅ.29. ಕಾರ್ಮಿಕ ಇಲಾಖೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐ.ಇ.ಸಿ ಚಟುವಟಿಕೆಗಳಡಿ ಸಂಘಟಿತ ಮತ್ತು ಅಸಂಘಟಿತ ವರ್ಗದ ಎಲ್ಲಾ ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಆಡಳಿತ ವರ್ಗದವರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಕಾನೂನುಗಳ ಬಗ್ಗೆ ಮತ್ತು ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಕಾನೂನು ಅರಿವು ಕಾರ್ಯಾಗಾರವನ್ನು ನವೆಂಬರ್ 4ರಂದು ಜಿಲ್ಲಾ ಪಂಚಾಯತ್‍ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರ ಕಾನೂನು ಅರಿವು: ಕಾರ್ಯಾಗಾರ Read More »

ಕರಾವಳಿ

ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ

(ನ್ಯೂಸ್ ಕಡಬ) newskadaba.com ಅ.29. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ರ ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25 ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು. ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್

ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ Read More »

ಕರಾವಳಿ, ಕರ್ನಾಟಕ

ಗೃಹರಕ್ಷಕ ದಳ ಕಛೇರಿಯಲ್ಲಿ ‘ಜಾಗೃತಿ ಅರಿವು ಸಪ್ತಾಹ-2024’

(ನ್ಯೂಸ್ ಕಡಬ) newskadaba.com ಅ.29. ಗೃಹರಕ್ಷಕದಳ ಕೇಂದ್ರ ಕಚೇರಿಯ ಆದೇಶದಂತೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ‘ಜಾಗೃತಿ ಅರಿವು ಸಪ್ತಾಹ-2024’ ಇದರ ಅಂಗವಾಗಿ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧರಾಗಿರುವುದಾಗಿ ಹಾಗೂ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಹೋರಾಟವನ್ನು ಬೆಂಬಲಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಸಮ್ಮುಖದಲ್ಲಿ “ಜಾಗೃತಿ ಅರಿವು ಸಪ್ತಾಹ-2024”ವನ್ನು ಆಚರಿಸಲಾಯಿತು. ಭ್ರಷ್ಟಾಚಾರ ನಿರ್ಮೂಲನಾ ಪ್ರತಿಜ್ಞೆಯಲ್ಲಿ ಕಛೇರಿಯ ಅಧೀಕ್ಷಕರಾದ ಶ್ರೀ ಎನ್. ಚಂದ್ರ, ಪ್ರಥಮ

ಗೃಹರಕ್ಷಕ ದಳ ಕಛೇರಿಯಲ್ಲಿ ‘ಜಾಗೃತಿ ಅರಿವು ಸಪ್ತಾಹ-2024’ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಅ.29. ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ (PMABHIM) ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆನ್ಲಾಕ್ ಆಸ್ಪತೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ಮಂಗಳವಾರ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ Read More »

ಕರಾವಳಿ

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ 150ನೇ ಜನ್ಮದಿನ- ಪ್ರಧಾನಿ ಕರೆಯಂತೆ ಏಕತೆಗಾಗಿ ಇಂದು ಓಟ ಕಾರ್ಯಕ್ರಮ ಆಯೋಜನೆ

(ನ್ಯೂಸ್ ಕಡಬ) newskadaba.com ಅ.29. ಉಕ್ಕಿನ ಮನುಷ್ಯ ಎಂದೇ ಬಿರುದಾಂಕಿತರಾದ ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಕರೆಯಂತೆ ಇಂದು ಮಂಗಳೂರು ನಗರದಲ್ಲಿ ‘ಏಕತಾ ಓಟ’ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ನಗರ ಮಂಗಳ ಕ್ರೀಡಾಂಗಣದಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್ ವರೆಗೆ (ನವಭಾರತ್ ಸರ್ಕಲ್) ನಡೆಯುವ ಈ ಏಕತಾ ಓಟದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಹಲವು

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ 150ನೇ ಜನ್ಮದಿನ- ಪ್ರಧಾನಿ ಕರೆಯಂತೆ ಏಕತೆಗಾಗಿ ಇಂದು ಓಟ ಕಾರ್ಯಕ್ರಮ ಆಯೋಜನೆ Read More »

ಕರಾವಳಿ, ಕರ್ನಾಟಕ

ಸನ್ಮಾನದಿಂದ ಜವಾಬ್ದಾರಿ ಹೆಚ್ಚಿದೆ- ಡಾ| ಚೂಂತಾರು

(ನ್ಯೂಸ್ ಕಡಬ) newskadaba.com ಅ.29. ರಾಷ್ಟ್ರಪತಿ ಪದಕ ಪುರಸ್ಕಾರ ಪಡೆದ ದ.ಕ ಜಿಲ್ಲಾ ಸಮಾದೇಷ್ಠ ಡಾ ಮುರಲೀ ಮೋಹನ್ ಚೂಂತಾರು ಅವರಿಗೆ ಉಳ್ಳಾಲ ಘಟಕದ ವತಿಯಿಂದ  ಉಳ್ಳಾಲದಲ್ಲಿ ಸನ್ಮಾನ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ ಚೂಂತಾರು, ಪದಕ ಮತ್ತು ಸನ್ಮಾನ ಪಡೆದು ಜವಾಬ್ದಾರಿ ಹೆಚ್ಚಿದೆ. ಮತ್ತಷ್ಟು ಹುಮ್ಮಸ್ಸಿನಿಂದ ಸಾರ್ವಜನಿಕ ಸೇವೆ ಮಾಡಲು ಸ್ಪೂರ್ತಿ ದೊರಕಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಸುನಿಲ್ ಹಾಗೂ ಇತರ ಹಿರಿಯ ಗೃಹರಕ್ಷಕರು ಉಪಸ್ಥಿತರಿದ್ದರು.

ಸನ್ಮಾನದಿಂದ ಜವಾಬ್ದಾರಿ ಹೆಚ್ಚಿದೆ- ಡಾ| ಚೂಂತಾರು Read More »

ಕರಾವಳಿ

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ

(ನ್ಯೂಸ್ ಕಡಬ) newskadaba.com ಕಡಬ, ಅ. 29. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಿದ್ದರೆ ಜನರ ಸಹಕಾರ ಅತ್ಯಗತ್ಯ. ಲಂಚ ತೆಗೆದುಕೊಳ್ಳುವುದು ಮಾತ್ರವಲ್ಲ, ಕೊಡುವುದು ಕೂಡ ಅಪರಾಧ ಎಂದು ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಡಿವೈಎಸ್‌ಪಿ ಡಾ।ಗಾನಾ ಪಿ.ಕುಮಾರ್ ಹೇಳಿದರು. ಅವರು ಸೋಮವಾರದಂದು ಕಡಬ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಭ್ರಷ್ಟಾಚಾರ ವಿರುದ್ಧದ ಜಾಗೃತಿ ಅರಿವು ಸಪ್ತಾಹ-2024ರ ಅಂಗವಾಗಿ ನಡೆದ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ Read More »

ಕರಾವಳಿ
Scroll to Top