NewsKadaba Team

ರಾಜ್ಯದಲ್ಲಿ ಮುಂದುವರಿದ ಚಳಿ

(ನ್ಯೂಸ್‌ ಕಡಬ)com,ಡಿ.26: ರಾಜ್ಯದಲ್ಲಿ ಮಾಗಿಚಳಿಯ ತೀವ್ರತೆ ಮುಂದುವರೆದಿದ್ದು, ಬೀದರ್‌ನಲ್ಲಿ ಕನಿಷ್ಠ ತಾಪಮಾನ 6.3 ಡಿ.ಸೆಂ.ನಷ್ಟು ದಾಖಲಾಗಿದೆ.ನಿನ್ನೆಯಿಂದೀಚೆಗೆ ಕನಿಷ್ಠ ತಾಪಮಾನದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಆದರೆ ವಾಡಿಕೆಗಿಂತಲೂ ಹೆಚ್ಚು ಚಳಿ ಕಂಡುಬರುತ್ತಿದೆ. 29 ರಿಂದ ಮೂರ್ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿ ಅಲ್ಪ ಹೆಚ್ಚಳ ಕಂಡುಬರಲಿದೆ. ಆದರೆ ಶೀತ ಗಾಳಿ ಮಾತ್ರ ಮುಂದುವರೆಯಲಿದೆ. ಇದರಿಂದ ಹಗಲು-ರಾತ್ರಿ ಎನ್ನದೆ ಚಳಿ ಜನರನ್ನು ಕಾಡತೊಡಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕನಿಷ್ಠ […]

ರಾಜ್ಯದಲ್ಲಿ ಮುಂದುವರಿದ ಚಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು

(ನ್ಯೂಸ್‌ ಕಡಬ)com,ಡಿ.26: ರೈಲು ಬಡಿದು ಕೊಡಗು ನಿವಾಸಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ನಿವಾಸಿ ರಾಜೇಶ್ (35) ಮೃತಪಟ್ಟವರು. ರೈಲಿನಿಂದಿಳಿದು ಹಳಿಯ ಮೂಲಕ ಅಡ್ಡದಾಟಿ ಫ್ಲಾಟ್ ಫೋರ್ಮ್ ಹತ್ತಲು ಯತ್ನಿಸುತ್ತಿದ್ದಾಗ ಗೂಡ್ಸ್ ರೈಲು ಬಡಿದು ಘಟನೆ ನಡೆದಿದೆ. ಅಫಘಾತಕ್ಕೀಡಾದ ವ್ಯಕ್ತಿಯ ತಲೆ ಸಂಪೂರ್ಣ ಜಜ್ಜಿ ಹೋಗಿದೆ. ಮೃತದೇಹ ಧರಿಸಿದ್ದ ಅಂಗಿಯ ಜೇಬಿನಿಂದ ದೊರೆತ ಆಧಾರ್ ಕಾರ್ಡಿನಲ್ಲಿ ಮಾಹಿತಿಯಂತೆ ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಮೃತ ಶರೀರದ ಅವಶೇಷಗಳನ್ನು ಸಂಗ್ರಹಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26:  ವ್ಯವಹಾರದಲ್ಲಿ ವಂಚಿಸಿ ಬಾರ್ ಸಿಬ್ಬಂದಿಯೋರ್ವ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ ನಲ್ಲಿ ಕಡಬದ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಅವರು ಬಾರಿನ ವಹಿವಾಟು ಬಗ್ಗೆ

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿರಿಯಾ: ಮಸೀದಿಯಲ್ಲಿ ಭೀಕರ ಸ್ಪೋಟ-8 ಮಂದಿ ಮೃತ್ಯು, 20 ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ

(ನ್ಯೂಸ್‌ ಕಡಬ)com,ಡಿ.26: ಸಿರಿಯಾದ ಹೋಮ್ಸ್ ನಗರದ ಮಸೀದಿಯೊಂದರಲ್ಲಿ ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸರ್ಕಾರಿ ನಿಯಂತ್ರಣದಲ್ಲಿರುವ ವಾಡಿ ಅಲ್-ದಹಾಬ್ ಪ್ರದೇಶದ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಪ್ರಾರ್ಥನೆಯಲ್ಲಿ ತೊಡಗಿದ್ದ ಜನರ ನಡುವೆ ಸ್ಫೋಟ ಸಂಭವಿಸಿದ್ದರಿಂದ ಹೆಚ್ಚಿನ ಆತಂಕ, ಗೊಂದಲ ಉಂಟಾಗಿದೆ. ಸ್ಫೋಟದ ತಕ್ಷಣವೇ ತುರ್ತು ಪ್ರತಿಕ್ರಿಯಾ ತಂಡಗಳು

ಸಿರಿಯಾ: ಮಸೀದಿಯಲ್ಲಿ ಭೀಕರ ಸ್ಪೋಟ-8 ಮಂದಿ ಮೃತ್ಯು, 20 ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾತ್ರಿ ವೇಳೆ ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ

(ನ್ಯೂಸ್‌ ಕಡಬ)com,ಡಿ.26: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಲಾರಿ ಡಿಕ್ಕಿ ಹೊಡೆದು ಬಸ್‌ ಬೆಂಕಿ ಹೊತ್ತಿಕೊಂಡು ಉರಿದು 7 ಮಂದಿ ಸಜೀವ ದಹನಗೊಂಡಿದ್ದ ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರೋದು.

ರಾತ್ರಿ ವೇಳೆ ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್!

(ನ್ಯೂಸ್‌ ಕಡಬ)com,ಡಿ.26: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜ್‌ಗೆ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠವು ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾ. ಬಿ. ಬಸವರಾಜ ಅವರಿದ್ದ ಪೀಠ, ಶಾಸಕ ಬೈರತಿ ಬಸವರಾಜ್ ಪರ ವಾದ ಮಂಡಿಸಿದ ವಕೀಲ ಸಂದೇಶ್ ಚೌಟ ಅವರ ವಾದವನ್ನು ಪರಿಗಣಿಸಿ, ಬಂಧನವಾದರೆ ತಕ್ಷಣವೇ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ವಕೀಲ ಸಂದೇಶ್ ಚೌಟ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

40 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ

(ನ್ಯೂಸ್‌ ಕಡಬ)com,ಡಿ.26: ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಜಿರಿಬಮ್‌ ಜಿಲ್ಲೆಯಿಂದ ಸುಮಾರು 40 ಕೋಟಿ ರೂ. ಮೌಲ್ಯದ ನಿಷೇಧಿತ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರೆಸೈನಿಕ ಪಡೆ ಹೇಳಿಕೆಯಲ್ಲಿ ತಿಳಿಸಿದೆ.ಈ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅದು ತಿಳಿಸಿದೆ. ಥಾಯ್‌ ಭಾಷೆಯಲ್ಲಿ ಕ್ರೇಜಿ ಮೆಡಿಸಿನ್‌‍ ಎಂದು ಕರೆಯಲ್ಪಡುವ ಯಾಬಾ ಟ್ಯಾಬ್ಲೆಟ್‌‍, ಮೆಥಾಂಫೆಟಮೈನ್‌ ಮತ್ತು ಕೆಫೀನ್‌ ಮಿಶ್ರಣವನ್ನು ಹೊಂದಿರುವ ಹೆಚ್ಚು ವ್ಯಸನಕಾರಿ ಔಷಧವಾಗಿದೆ. ಇದು ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ, ಇದು ತೀವ್ರ ಆರೋಗ್ಯ ಅಪಾಯಗಳನ್ನುಂಟುಮಾಡುತ್ತದೆ. ಡಿಸೆಂಬರ್‌

40 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ : ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ’-ಸಿಎಂ

(ನ್ಯೂಸ್‌ ಕಡಬ)com,ಡಿ.26: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

‘ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ : ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ’-ಸಿಎಂ Read More »

ರಾಷ್ಟ್ರೀಯ ನ್ಯೂಸ್

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ

(ನ್ಯೂಸ್‌ ಕಡಬ)com,ಡಿ.26: ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿತ್ತು. ದುರ್ಘಟನೆಯಲ್ಲಿ ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಎಂಬುವವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಪಾರ್ಕ್‌, ಉದ್ಯಾನವನಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

(ನ್ಯೂಸ್‌ ಕಡಬ)com,ಡಿ.26: ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿರುವ ಪಾರ್ಕ್‌, ಉದ್ಯಾನವರ, ಕೆರೆಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.ಡಿ. 31 ರ ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಜಿಬಿಎ ವ್ಯಾಪ್ತಿಯ ಪಾರ್ಕ್‌ಗಳು, ಉದ್ಯಾನವನಗಳು, ಕೆರೆಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು ಎಂಬ ಉದ್ದೇಶದಿಂದ ಇಂತಹ ತೀರ್ಮಾನ ಕೈಗೊಳ್ಳಲಾಗಿದ್ದು ನಾಗರೀಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಪಾರ್ಕ್‌, ಉದ್ಯಾನವನಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top