NewsKadaba Team

ಜ. 08ರವರೆಗೆ ಕಡಬ ತಾಲೂಕು ಭೂಮಿ ಕೇಂದ್ರದಲ್ಲಿ ಆರ್.ಟಿ.ಸಿ. ವಿತರಣೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಜ. 04. ಇಲ್ಲಿನ ತಾಲೂಕು ಕಛೇರಿಯ ಭೂಮಿ ಕೇಂದ್ರದಲ್ಲಿ ಜನವರಿ 8ರ ವರೆಗೆ ಪಹಣಿ (ಆರ್‌ಟಿಸಿ)ಗಳ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯಲಿದ್ದು, ಭೂಮಿ ಕೇಂದ್ರದ ಎಲ್ಲಾ ಕೆಲಸಗಳು ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಿ ಆರ್.ಟಿ.ಸಿಗಳನ್ನು ಆನ್‌-ಲೈನ್ ಸೆಂಟರ್‌ಗಳಲ್ಲಿ ಪಡೆದುಕೊಳ್ಳಬಹುದು ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 08ರವರೆಗೆ ಕಡಬ ತಾಲೂಕು ಭೂಮಿ ಕೇಂದ್ರದಲ್ಲಿ ಆರ್.ಟಿ.ಸಿ. ವಿತರಣೆ ಸ್ಥಗಿತ Read More »

ಕರಾವಳಿ, ಕರ್ನಾಟಕ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರ ಪರ್ವತ ಯಾತ್ರೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 04. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಇಂದು ಮುಂಜಾನೆ ಕುಮಾರ ಪರ್ವತ ಯಾತ್ರೆಯನ್ನು ಆರಂಭಿಸಲಾಯಿತು. ಅಭಿವೃದ್ದಿ ಸಮಿತಿಯ ಸದಸ್ಯ ಮೋಹನ್ ರಾಮ್ ಸುಳ್ಮಿಯವರು ತೆಂಗಿನಕಾಯಿ ಒಡೆದು, ಧ್ವಜ ಹಸ್ತಾಂತರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಿಬ್ಬಂದಿಗಳು ಯಾತ್ರೆಯನ್ನು ಕೈಗೊಂಡಿದ್ದಾರೆ.

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರ ಪರ್ವತ ಯಾತ್ರೆ ಆರಂಭ Read More »

ಕರಾವಳಿ, ಕರ್ನಾಟಕ

ಕಾಂಗ್ರೆಸ್ ನಾಯಕ ವಿಲಾಸ್ ರಾವ್ ಪಾಟೀಲ್ ನಿಧನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,ಜ. 04. ರಾಜ್ಯದ ಮಾಜಿ ಸಹಕಾರಿ ಸಚಿವ ವಿಲಾಸ್ ರಾವ್ ಪಾಟೀಲ್ ಉಂಡಾಲ್ಕರ್ ಇಂದು ಬೆಳಗ್ಗೆ ಸತಾರ ಜಿಲ್ಲೆಯ ಕರಾಡ್ ತಾಲೂಕಿನಲ್ಲಿ ನಿಧನರಾದರು.   ಇವರಿಗೆ 84 ವರ್ಷ ವಯಸ್ಸಾಗಿತ್ತು. ವಿಲಾಸ್ ರಾವ್ ಗೆ ಕಳೆದ 15 ದಿನಗಳಿಂದ ಅನಾರೋಗ್ಯ ಕಾಡುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಗ್ಗೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಾಂಗ್ರೆಸ್ ನಾಯಕ ವಿಲಾಸ್ ರಾವ್ ಪಾಟೀಲ್ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಬೈಲ್ ಕೊಡಿಸಲಿಲ್ಲವೆಂದು ಆತ್ಮಹತ್ಯೆಗೈದ ಬಾಲಕ

(ನ್ಯೂಸ್ ಕಡಬ) newskadaba.com ಕಾನ್ಪುರ, ಜ. 04. ಹೊಸ ಮೊಬೈಲ್ ಕೊಡಿಸಲಿಲ್ಲವೆಂಬ ಬೇಸರದಲ್ಲಿ ಅಪ್ರಾಪ್ತ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಕಾನ್ಪುರದಲ್ಲಿ ನಡೆದಿದೆ. ಮೃತ ಬಾಲಕನು ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದು, ಹಣಕಾಸಿನ ಸಮಸ್ಯೆಯಿರುವುದರಿಂದ ಕೆಲವು ದಿನಗಳ ಬಳಿಕ ಹೊಸ ಫೋನ್ ಕೊಡಿಸುವುದಾಗಿ ತಂದೆ ಹೇಳಿದ್ದರು. ಆದರೆ ಇದಕ್ಕೆ ಒಪ್ಪದ ಮಗ ಆಕ್ರೋಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೊಬೈಲ್ ಕೊಡಿಸಲಿಲ್ಲವೆಂದು ಆತ್ಮಹತ್ಯೆಗೈದ ಬಾಲಕ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಸಿಲೆ ಅರಣ್ಯದಲ್ಲಿ ಹೆಣ್ಣಾನೆ ಸಂಶಯಾಸ್ಪದ ಸಾವು

(ನ್ಯೂಸ್ ಕಡಬ) newskadaba.com ಹಾಸನ, ಜ.04. ಹೆಣ್ಣಾನೆಯೊಂದು ಸಂಶಯಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಮೀಸಲು ಅರಣ್ಯದಲ್ಲಿ ಬೆಳಕಿಗೆ ಬಂದಿದೆ.   ಮೀಸಲು ಅರಣ್ಯದ ಆನೆಗುಂಡಿ ಎಂಬಲ್ಲಿ  ಹೆಣ್ಣಾನೆಯ ಶವ ಪತ್ತೆಯಾಗಿದ್ದು ಇದರ ಮೇಲೆ ಗಾಯದ ಗುರುತು ಕಂಡು ಬಂದ ಹಿನ್ನೆಲೆಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ., ಸ್ಥಳಕ್ಕೆ ಡಿಸಿಎಫ್ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಬಿಸಿಲೆ ಅರಣ್ಯದಲ್ಲಿ ಹೆಣ್ಣಾನೆ ಸಂಶಯಾಸ್ಪದ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಎಸ್ಡಿಪಿಐ ಕಛೇರಿಗೆ ಬೆಂಕಿ ಹಚ್ಚಿದ ಪ್ರಕರಣ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಎಸ್ಡಿಪಿಐ ಕಛೇರಿಗೆ ಬೆಂಕಿ ಹಚ್ಚಿದ ಘಟನೆಯನ್ನು ಖಂಡಿಸಿ ಇಂದು ವಿಟ್ಲ ವಲಯ ಎಸ್ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಿಜೆಪಿಯ ವಿರುದ್ದ ಘೋಷಣೆ ಕೂಗಿದ ಕಾರ್ಯಕರ್ತರು ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ, ಪೊಲೀಸ್ ಠಾಣೆಗೆ ರ್ಯಾಲಿ ನಡೆಸಲು ಮುಂದಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನೆ ಹಿಂತೆಗೆಯುವಂತೆ ಮನವಿ ಮಾಡಿದರು. ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದ ಎಸ್.ಐ ರಾಜೇಶ್ ಕೆ.ವಿ ಅವರು ತಕ್ಷಣವೇ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.

ವಿಟ್ಲ: ಎಸ್ಡಿಪಿಐ ಕಛೇರಿಗೆ ಬೆಂಕಿ ಹಚ್ಚಿದ ಪ್ರಕರಣ ಖಂಡಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 04. ಅಪರಿಚಿತ ವಾಹನವೊಂದು ಢಿಕ್ಕು ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಅರಂತೋಡಿನಲ್ಲಿ ನಡೆದಿದೆ. ಮೃತರನ್ನು ಬಿಳಿಯಾರಿನ ರಾಘವ ಎಂಬವರ ಪತ್ನಿ ಅಮ್ಮಣ್ಣಿ(೫೮) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಇವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ. ಈ ಕುರೊತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವೈವಾಹಿಕ ಜಾಲತಾಣದ ಮೂಲಕ ಯುವಕರಿಗೆ ಮೋಸ ➤ ಶಿಕ್ಷಕಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 04. ವೈವಾಹಿಕ ಜಾಲತಾಣದ ಮೂಲಕ ಯುವಕರನ್ನು ಪರಿಚಯಿಸಿ, ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದಳು ಎಂಬ ಆರೋಪದಡಿಯಲ್ಲಿ  ಸಿ.ಎಸ್. ಕವಿತಾ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಇವರು ಸಹೋದ್ಯೋಗಿಯ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಕೆಲಸದಿಂದ ವಜಾ ಮಾಡಲಾಗಿದ್ದು, ಬ್ಲ್ಯಾಕ್‌ಮೇಲ್ ಸಂಬಂಧ ಪ್ರೇಮ್ ಎಂಬುವರು ದೂರು ನೀಡಿದ್ದು, ತನಿಖೆ ಕೈಗೊಂಡು ಕವಿತಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ವೈವಾಹಿಕ ಜಾಲತಾಣದ ಮೂಲಕ ಯುವಕರಿಗೆ ಮೋಸ ➤ ಶಿಕ್ಷಕಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಸದ್ಯದಲ್ಲೇ ತೆರೆಯಲಿದೆ ಬ್ಯಾಂಕ್ ಆಫ್ ಬರೋಡಾ ಎಟಿಎಂ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 04. ಕಳೆದ ಇಪ್ಪತ್ತೈದಯಮು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಿಜಯಾ ಬ್ಯಾಂಕ್ ಇದೀಗ ಬ್ಯಾಂಕ್ ಆಫ್ ಬರೋಡಾ ಆದ ನಂತರವೂ ಇದುವರೆಗೂ ಎಟಿಎಂ ಹೊಂದಿಲ್ಲ ಇದರಿಂದಾಗಿ ಬ್ಯಾಂಕ್ ಗ್ರಾಹಕರಿಗೆ ತೊಂದರೆಯಾಗುತ್ತಿದೆ ಎಂದು ಉದ್ಯಮಿ ನಿತಿನ್ ನೂಚಿಲ ಅವರು ಪ್ರಧಾನಿ ಕಾರ್ಯಾಲಯಕ್ಕೆ ದೂರು ನೀಡಿದ್ದರು. ಈ ದೂರಿನನ್ವಯ ಸ್ಪಂದನೆ ನೀಡಿದ ಪ್ರಧಾನಿ ಕಾರ್ಯಾಲಯವು ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವಂತೆ ಬ್ಯಾಂಕ್ ಆಫ್ ಬರೋಡಾದ ಗುಜರಾತ್ ನ ಪ್ರಧಾನ ಕಛೇರಿಯ ಜನರಲ್ ಮ್ಯಾನೇಜರ್ ಗೆ

ಸುಬ್ರಹ್ಮಣ್ಯ: ಸದ್ಯದಲ್ಲೇ ತೆರೆಯಲಿದೆ ಬ್ಯಾಂಕ್ ಆಫ್ ಬರೋಡಾ ಎಟಿಎಂ Read More »

ಕರಾವಳಿ, ಕರ್ನಾಟಕ

ಪುತ್ತೂರು: ಇಂದು (ಜ.04) ಒಂದು ಕೊರೋನಾ ಪಾಸಿಟಿವ್ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 04. ಇಂದಿನ ಆರೋಗ್ಯ ಇಲಾಖಾ ವರದಿಯಂತೆ ಪುತ್ತೂರು ತಾಲೂಕಿನಲ್ಲಿ ಒಂದು ಕೊರೋನಾ ಪ್ರಕರಣ ದೃಢಪಟ್ಟಿದೆ.

ಪುತ್ತೂರು: ಇಂದು (ಜ.04) ಒಂದು ಕೊರೋನಾ ಪಾಸಿಟಿವ್ ಪತ್ತೆ Read More »

ಕರಾವಳಿ
Scroll to Top