NewsKadaba Team

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com  ಅ. 14. ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಮೆಡಿಕಲ್ ಅಧಿಕಾರಿ- ಮಂಜುನಾಥ್, ಜಿ. ವಿ. ಪಿ.ಯು ಬೋರ್ಡ್ […]

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com  ಅ. 14. ದೀಪಾವಳಿ ಹಬ್ಬದ ಪ್ರಯುಕ್ತ ರಾಜಧಾನಿಯಿಂದ ಇತರ ಕಡೆಗಳಿಗೆ ಪ್ರಯಾಣಿಕರ ಜನದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ. ಇವು ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ನಡುವೆ ಓಡಾಡಲಿವೆ. ದೀಪಾವಳಿ ಹಬ್ಬ ಹಾಗೂ ಮುಂದಿನ ವಾರಾಂತ್ಯಗಳು ಒಟ್ಟಿಗೆ ಬಂದಿರುವುದರಿಂದ ಈ ಬಾರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿಯ ವಿಶೇಷ ಬಸ್ಸುಗಳ ಜೊತೆಗೆ ರೈಲ್ವೆ ಇಲಾಖೆಯೂ ಹೆಚ್ಚಿನ ರೈಲುಗಳನ್ನು ಹೊರಡಿಸಿದೆ. ಯಶವಂತಪುರ- ಮಂಗಳೂರು ಜಂಕ್ಷನ್, ಬೆಂಗಳೂರು ಕಂಟೋನ್ಮೆಂಟ್ ವಿಶೇಷ

ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ Read More »

ಕರ್ನಾಟಕ

RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

(ನ್ಯೂಸ್‌ ಕಡಬ) newskadaba.com ಅ. 14. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತಾಗಿ ತಮಿಳುನಾಡು ಸರ್ಕಾರದ ನೀತಿಗಳನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಂದು ಸೂಚನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ

RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ- ಕಂಪನಿ ಬಂದ್ ಗೆ ಆದೇಶ

(ನ್ಯೂಸ್‌ ಕಡಬ) newskadaba.com ಅ. 14. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ ಕಂಪನಿಯಾದ ಸ್ರೇಸನ್ ಫಾರ್ಮಾಸ್ಯುಟಿಕಲ್‌ ನ ಉತ್ಪಾದನಾ ಪರವಾನಗಿಯನ್ನು ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ಸೋಮವಾರದಂದು ರದ್ದುಗೊಳಿಸಿದ್ದಲ್ಲದೇ ಕಂಪನಿಯನ್ನು ಮುಚ್ಚುವಂತೆ ಆದೇಶಿಸಿರುವ ಕುರಿತು ವರದಿಯಾಗಿದೆ. ಈ ಔಷಧದಲ್ಲಿ ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್ 48.6% ಇರುವುದು ಪತ್ತೆಯಾಗಿದೆ. ಈ ಔಷಧವು ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ವರದಿಯಾಗಿದೆ. ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್‌ ಇರುವ ಸ್ರೇಸನ್ ಕಂಪನಿಯನ್ನು

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ- ಕಂಪನಿ ಬಂದ್ ಗೆ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ!

(ನ್ಯೂಸ್‌ ಕಡಬ) newskadaba.com,  ಅ .13:  ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ ಭಯಾನಕ ಘಟನೆ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಕೇಶ್ ಎಂಬುವವರಿಗೆ ಸೇರಿದ ಈ ಇವಿ ಬೈಕ್, ಮನೆಯ ಬೇಸ್‌ಮೆಂಟ್‌ನಲ್ಲಿ ಚಾರ್ಜಿಂಗ್‌ನಲ್ಲಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಾರ್ಜಿಂಗ್‌ನಲ್ಲಿದ್ದ ಎಲೆಕ್ಟ್ರಿಕ್ ಬೈಕ್ ಒಂದು ಇದ್ದಕ್ಕಿದ್ದಂತೆ ಸ್ಪೋಟಗೊಂಡು ಬೆಂಕಿಗಾಹುತಿಯಾಗಿದೆ. ಸ್ಪೋಟದಿಂದಾಗಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಕ್ಕದಲ್ಲಿದ್ದ ಸೈಕಲ್ ಕೂಡ ಬೆಂಕಿಗೆ ಆಹುತಿಯಾಗಿದೆ. ಬೆಂಕಿ

ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂತಾರ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಭರ್ಜರಿ ಸ್ವಾಗತ

(ನ್ಯೂಸ್‌ ಕಡಬ) newskadaba.com,  ಅ .13:  ‘ಕಾಂತಾರ: ಚಾಪ್ಟರ್ 1’ ಚಿತ್ರದಿಂದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಮತ್ತೊಮ್ಮೆ ಭಾರತದ ಸಿನಿಮಾ ರಂಗದಲ್ಲಿ ತಮ್ಮದೇ ಆದ ಶಕ್ತಿಶಾಲಿ ಸ್ಥಾನವನ್ನು ಕಾಣುವಲ್ಲಿ ಯಶಸ್ವಿಯಾಗಿದ್ದಾರೆ. ಈ ಚಿತ್ರಕ್ಕಾಗಿ ಅವರು ಇಟ್ಟುಕೊಂಡಿದ್ದ ನಿರೀಕ್ಷೆಗಳಿಗಿಂತ ಬಹಳ ಹೆಚ್ಚು ಪ್ರತಿಸ್ಪಂದನೆ ಬಂದಿದೆ. ವಿಶೇಷವೆಂದರೆ, ಈ ಸಿನಿಮಾ ಕನ್ನಡದಲ್ಲಷ್ಟೇ ಅಲ್ಲದೆ ಹಿಂದಿ ಪ್ರೇಕ್ಷಕರಲ್ಲಿಯೂ ಭಾರೀ ಸದ್ದು ಮಾಡಿದೆ. ಇದರ ಪೂರೈಕೆಯಾಗಿ, ರಿಷಬ್ ಶೆಟ್ಟಿಗೆ ಮುಂಬೈನಲ್ಲಿ ಲಭಿಸಿದ ಅದ್ದೂರಿ ಸ್ವಾಗತ ಸಾಕ್ಷಿಯಾಗಿದ್ದು, ಅಭಿಮಾನಿಗಳು ಕಾರಿನ

ಕಾಂತಾರ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಭರ್ಜರಿ ಸ್ವಾಗತ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13:  ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ

(ನ್ಯೂಸ್‌ ಕಡಬ) newskadaba.com,  ಅ .13:  ಅತಿವೃಷ್ಟಿಯಿಂದಾದ ಬೆಳೆಹಾನಿಯ ಸಂಪೂರ್ಣ ವರದಿ ಬಂದ ತಕ್ಷಣ, ದೀಪಾವಳಿ ಹಬ್ಬದೊಳಗಾಗಿ ಬೀದರ್ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ತಕ್ಷಣ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅತಿವೃಷ್ಟಿಯಿಂದಾದ ಹಾನಿ ಕುರಿತ ಸಮೀಕ್ಷಾ ವರದಿಗಳು ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಈ ವರ್ಷ ಅತಿವೃಷ್ಟಿಯಿಂದ ಬೀದರ ಜಿಲ್ಲೆಯಾದ್ಯಂತ ರೈತರ ಬೆಳೆಗಳು, ರಸ್ತೆ ಮತ್ತು

ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ .13:  ಅನಾರೋಗ್ಯ ಹಿನ್ನೆಲೆ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಇದೀಗ ಸ್ಥಿರವಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜ್ವರ ಹಾಗೂ ಯೂರಿನ್ ಇನ್​ಫೆಕ್ಷನ್​​ನಿಂದಾಗಿ ದೇವೇಗೌಡ ಅವರು, ಅಕ್ಟೋಬರ್ 6ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ

ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣ: ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್‌ ಕಡಬ) newskadaba.com,  ಅ .13: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಇಂದು ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಸಿಬಿಐಗೆ ವಹಿಸಿ ಆದೇಶಿಸಿದೆ. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ತನಿಖೆಯನ್ನು

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣ: ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ Read More »

ಬ್ರೇಕಿಂಗ್ ನ್ಯೂಸ್
Scroll to Top