Ashitha Soodlu

ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟ: ಓರ್ವ ಸಾವು

(ನ್ಯೂಸ್‌ ಕಡಬ) newskadaba.com, ಆ.15: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯಪಾಳ್ಯದಲ್ಲಿ ನಡೆದಿದೆ. ಸ್ಪೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆಯ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸಂಜಯ್‌ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟ: ಓರ್ವ ಸಾವು Read More »

ಕರ್ನಾಟಕ

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.15: ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದರು. ಈ ದೀಪಾವಳಿಯ ವೇಳೆಗೆ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಹಾಗೂ ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಹೊಸ ಸರಳೀಕೃತ ಜಿಎಸ್‌ಟಿ ರಚನೆಯನ್ನು ನೀವು ಕಾಣುತ್ತೀರಿ. ಈ ಬದಲಾವಣೆಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು

(ನ್ಯೂಸ್‌ ಕಡಬ) newskadaba.com, ಆ.15: ಇಂದಿನಿಂದ ಕರ್ನಾಟಕದಾದ್ಯಂತ ವರ್ಷಧಾರೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೀದರ್‌, ಬೆಳಗಾವಿ, ಕೊಡಗು, ಧಾರವಾಡ, ಕಲಬುರ್ಗಿ, ಹಾವೇರಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗದಗ, ವಿಜಯನಗರ, ಕೊಪ್ಪಳ, ತುಮಕೂರು, ರಾಯಚೂರು,

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು Read More »

ಕರ್ನಾಟಕ

ಸ್ವಾತಂತ್ರ್ಯ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com, ಆ.15:‌ ಇಂದು ಎಲ್ಲೆಡೆ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದೆ. 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ತೆರೆದ ಜೀಪ್‌ನಲ್ಲಿ ಪರೇಡ್‌ ವೀಕ್ಷಣೆ ಮಾಡಿದರು. ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರನ್ನೂ ಸ್ಮರಿಸೋಣ ಎಂದು ಹೇಳಿದರು. ಪಹಲ್ಗಾಮ್‌ ದಾಳಿಯಲ್ಲಿ ಮಡಿದವರು ಹಾಗೂ ಪಾಕಿಸ್ತಾನದ ವಿರುದ್ದ ಹೋರಾಡಿ ಮಡಿದವರಿಗೂ ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ Read More »

ಕರ್ನಾಟಕ

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.15:‌ ದೇಶಾದ್ಯಂತ ಇಂದು ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು. ಬಳಿಕ ಧ್ವಜಾರೋಹಣಕ್ಕೆ ಕೆಂಪುಕೋಟೆಗೆ ಆಗಮಿಸಿದರು. ಪ್ರಧಾನಿ ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸ್ವಾಗತಿಸಿದರು. ನಂತರ ಪ್ರಧಾನಿ ಮೋದಿ ಅವರು ಧ್ವಜಾರೋಹಣ ನೇರವೇರಿಸಿದರು. ಈ ವೇಳೆ

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನೋ ಅಭ್ಯಾಸ ಇದೆಯಾ..?

(ನ್ಯೂಸ್‌ ಕಡಬ) newskadaba.com, ಆ.08: ಸಿಹಿತಿಂಡಿ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಆದರೆ, ಕೆಲವರು ಮಾತ್ರ ಬೆಳಗ್ಗೆ ಎದ್ದ ಕೂಡಲೇ ಬೇರೆ ಯಾವ ಆಹಾರವನ್ನು ಸೇವಿಸದೇ ಸಿಹಿತಿಂಡಿ ಅಥವಾ ಚಾಕೋಲೇಟ್‌, ಬಿಸ್ಕತ್ತುಗಳನ್ನು ತಿನ್ನುತ್ತಾರೆ. ಈ ರೀತಿಯಾದ ಅಭ್ಯಾಸ ನಿಮಗಿದ್ದಲ್ಲಿ ಇಂದೇ ಬಿಟ್ಟುಬಿಡಿ. ಏಕೆಂದರೆ, ಇದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಬೆಳಗ್ಗೆ ಎದ್ದ ಕೂಡಲೇ ಸಿಹಿತಿಂಡಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನುವುದರಿಂದ ಟೈಪ್2‌

ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನೋ ಅಭ್ಯಾಸ ಇದೆಯಾ..? Read More »

ಆರೋಗ್ಯ ಮಾಹಿತಿ

ರಾಹುಲ್‌ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ: ಡಿಕೆ ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.08: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ. ರಾಹುಲ್‌ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ

ರಾಹುಲ್‌ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ: ಡಿಕೆ ಶಿವಕುಮಾರ್‌ Read More »

ಕರ್ನಾಟಕ

ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ

(ನ್ಯೂಸ್‌ ಕಡಬ) newskadaba.com, ಆ.08: ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಆರೋಪಿ ಎಂದು ತೀರ್ಮಾನ ಮಾಡಿ ರಾಜ್ಯ ಸರ್ಕಾರ ಈಗ ಬೇಕಾದ ಸಾಕ್ಷಿ ಹುಡುಕುತ್ತಿದೆ ಎಂದು ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ದೇಗುಲಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ಉಂಟು ಮಾಡಿದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ, ಸೌಜನ್ಯ ಪ್ರಕರಣಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈ

ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ Read More »

ಕರ್ನಾಟಕ

ರಾಹುಲ್‌ ಆರೋಪದಲ್ಲಿ ಹುರುಳಿಲ್ಲ: ಜಗದೀಶ್‌ ಶೆಟ್ಟರ್

(ನ್ಯೂಸ್‌ ಕಡಬ) newskadaba.com, ಆ.08: ಲೋಕಸಭಾ ಚುನಾವಣೆಯ ವೇಳೆ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.‌ ದೆಹಲಿಯಲ್ಲಿ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಈಗ ಆರೋಪ ಮಾಡುತ್ತಿದ್ದಾರೆ. ಒಂದು ವರ್ಷದ ಹಿಂದೆ ಏಕೆ ಮಾಡಿಲ್ಲ. ಈ ವಿಚಾರವಾಗಿ ನಿಮ್ಮ ಬೆಂಗಳೂರು ಸೆಂಟ್ರಲ್‌ನ ಕಾಂಗ್ರೆಸ್‌ ಅಭ್ಯರ್ಥಿ ಏಕೆ ಪ್ರಶ್ನೆ ಮಾಡಿಲ್ಲ. ಈ ಬಗ್ಗೆ ಇಲ್ಲಿವರೆಗೆ ಏಕೆ ದೂರು ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್‌ ಆರೋಪದಲ್ಲಿ ಹುರುಳಿಲ್ಲ: ಜಗದೀಶ್‌ ಶೆಟ್ಟರ್ Read More »

ರಾಷ್ಟ್ರೀಯ ನ್ಯೂಸ್

ಕ್ವಿಟ್‌ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.08: ಇಂದು ಕ್ವಿಟ್‌ ಇಂಡಿಯಾ ಚಳವಳಿ ದಿನ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ವೊಂದನ್ನು ಮಾಡಿದ್ದಾರೆ. ಮಹಾತ್ಮ ಗಾಂಧಿಯವರ “ಬ್ರಿಟಿಷರೇ ಭಾರತ ಬಿಟ್ಟು ತೊಲಗಿ” ಎಂಬ ಘೋಷಣೆಯು ದೇಶವಾಸಿಗಳ ಎದೆಯಲ್ಲಿ ಸುಪ್ತವಾಗಿದ್ದ ಆಕ್ರೋಶ, ಅಸಹನೆಯನ್ನು ಬಡಿದೆಬ್ಬಿಸಿ, ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತು ಎಂದಿದ್ದಾರೆ. ಶತಮಾನಗಳ‌ ಕಾಲ ಭಾರತವನ್ನು – ಭಾರತೀಯರನ್ನು ಕೊಳ್ಳೆಹೊಡೆಯುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ಕ್ವಿಟ್ ಇಂಡಿಯಾ ಚಳವಳಿ ನಡುಗಿಸಿದ್ದು ಮಾತ್ರವಲ್ಲ, ಇನ್ನು ಹೆಚ್ಚು ಕಾಲ ಹಿಂಸೆ, ದೌರ್ಜನ್ಯಗಳ ಮೂಲಕ

ಕ್ವಿಟ್‌ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top