Ashitha Soodlu

ಧ್ರುವ್‌ ಜುರೆಲ್‌ಗೆ ಸಿಕ್ಕಿತು ನಾಯಕನ ಪಟ್ಟ..!

(ನ್ಯೂಸ್‌ ಕಡಬ) newskadaba.com, ಆ.08: ಟೀಂ ಇಂಡಿಯಾ ಆಟಗಾರ ಧ್ರುವ್‌ ಜುರೆಲ್‌ ಅವರನ್ನು ದುಲೀಪ್‌ ಟ್ರೋಫಿಯಲ್ಲಿ ಕೇಂದ್ರ ವಲಯದ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ದುಲೀಪ್‌ ಟ್ರೋಫಿ ಆ.28ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. 24 ವರ್ಷದ ಧ್ರುವ್‌ ಜುರೆಲ್‌, ಈವರೆಗೆ ಭಾರತ ತಂಡದ ಪರ 5 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, ಈ ಪೈಕಿ ಅವರು 1 ಅರ್ಧಶತಕದೊಂದಿಗೆ 255 ರನ್‌ ಗಳಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ ಓವಲ್‌ ಟೆಸ್ಟ್‌ನಲ್ಲಿ ಧ್ರುವ್‌ ಜುರೆಲ್‌ ಆಡಿದ್ದರು. ಗಾಯಗೊಂಡ ರಿಷಭ್‌ ಪಂತ್‌ ಬದಲಿಗೆ ಅವರು ಆಡುವ […]

ಧ್ರುವ್‌ ಜುರೆಲ್‌ಗೆ ಸಿಕ್ಕಿತು ನಾಯಕನ ಪಟ್ಟ..! Read More »

ಕ್ರೀಡಾ ನ್ಯೂಸ್

ಕಾಂತಾರ ಚಾಪ್ಟರ್‌ 1: ಕನಕವತಿ ಪೋಸ್ಟರ್‌ ರಿಲೀಸ್

(ನ್ಯೂಸ್‌ ಕಡಬ) newskadaba.com, ಆ.08:‌ ಕಾಂತಾರ ಚಿತ್ರದ ಪ್ರೀಕ್ವೆಲ್‌ ಆಗಿರುವ ಕಾಂತಾರ: ಚಾಪ್ಟರ್‌ 1 ಚಿತ್ರದ ನಾಯಕಿಯಾಗಿ ರುಕ್ಮಿಣಿ ವಸಂತ್‌ ಅಭಿನಯಿಸುತ್ತಿದ್ದಾರೆ.‌ ವರಮಹಾಲಕ್ಷ್ಮೀ ಹಬ್ಬದ ಈ ಶುಭದಿನದಂದು ಅವರ ಪಾತ್ರದ ಪೋಸ್ಟರ್‌ ಬಿಡುಗಡೆಯಾಗಿದೆ. ಇದರಿಂದ ಅಭಿಮಾನಿಗಳಲ್ಲಿ ರುಕ್ಮಿಣಿ ವಸಂತ್‌ ಅವರ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿದೆ. ಕಾಂತಾರ: ಚಾಪ್ಟರ್‌1 ಚಿತ್ರದಲ್ಲಿ ರುಕ್ಮಿಣಿ ವಸಂತ್‌ ಕನಕವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರುಕ್ಮಿಣಿ ವಸಂತ್‌ ಅವರು ಯುವರಾಣಿ ರೀತಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನ ಹಿಂಭಾಗ ನೋಡಿದರೆ ರಾಜರ ಆಸ್ಥಾನದ ರೀತಿ

ಕಾಂತಾರ ಚಾಪ್ಟರ್‌ 1: ಕನಕವತಿ ಪೋಸ್ಟರ್‌ ರಿಲೀಸ್ Read More »

ಸಿನಿಮಾ

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ವಿರುದ್ದ ಹೆಚ್‌ಡಿಕೆ ಕಿಡಿ

(ನ್ಯೂಸ್‌ ಕಡಬ) newskadaba.com, ಆ.08:‌ ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ದ ಕಿಡಿಕಾರಿದ್ದಾರೆ. ಗುರುವಾರ ನವದೆಹಲಿಯಲ್ಲಿ ರಾಹುಲ್‌ ಗಾಂಧಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ, ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ವಿರುದ್ದ ಹೆಚ್‌ಡಿಕೆ ಕಿಡಿ Read More »

ಕರ್ನಾಟಕ

Karnataka Rains: 16 ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.08:‌ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ಗದಗ, ಬಾಗಲಕೋಟೆ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ವಿಜಯಪುರ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಳಗಾವಿ, ಯಾದಗಿರಿ,

Karnataka Rains: 16 ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

ಸುಧಾಕರ್‌ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆ.07: ಬಿಜೆಪಿ ಸಂಸದ ಕೆ.ಸುಧಾಕರ್‌ ಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಬಾಪೂಜಿ ನಗರದ ನಿವಾಸಿ ಬಾಬು(32)ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗದ್ದರು. ಚಿಕ್ಕಬಳ್ಳಾಪು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಸಂಸದ ಡಾ.ಕೆ.ಸುಧಾಕರ್‌ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್‌ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25

ಸುಧಾಕರ್‌ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ Read More »

ಕರ್ನಾಟಕ

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಪರಮೇಶ್ವರ್‌

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಕಾರಣ, ಉದ್ದೇಶ ಏನು ಎನ್ನುವ ಬಗ್ಗೆ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಗಲಾಟೆ ಏಕೆ ಆಗುತ್ತಿದೆ ಎಂಬುದು ನನಗೆ ಗೊತ್ತಿಲ್ಲ. ಜನರ ಆಗ್ರಹದ ಹಿನ್ನೆಲೆ ತನಿಖೆಗೆ ಎಸ್‌ಐಟಿ ರಚನೆ ಮಾಡಿದ್ದೇವೆ. ನಿನ್ನೆ

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಪರಮೇಶ್ವರ್‌ Read More »

ಕರ್ನಾಟಕ

ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಶಿಕ್ಷೆ ಖಂಡಿತ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಬಾಳೆಬರೆ ಘಾಟಿಯಲ್ಲಿ ಭೂಕುಸಿತ: ಭಾರೀ ವಾಹನ ಸಂಚಾರ ಬಂದ್‌

(ನ್ಯೂಸ್‌ ಕಡಬ) newskadaba.com, ಆ.07: ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್‌ ಸರಪಳಿ ಹೆರ್‌ಪಿನ್‌ ತಿರುವಿನಲ್ಲಿ ಭೂಕುಸಿತ ಉಂಟಾಗಿದೆ. ಹಾಗಾಗಿ ಸುರಕ್ಷತಾ ದೃಷ್ಟಿಯಿಂದ ತಾತ್ಕಾಲಿಕವಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ತೀರ್ಥಹಳ್ಳಿಯಿಂದ ರಾವೆ–ಕಾನಗೋಡು–ಮಾಸ್ತಿಕಟ್ಟೆ–ಹುಲಿಕಲ್‌ ಘಾಟ್–ಹೊಸಂಗಡಿ–ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರೀ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ–ರಾವೆ–ಕಾನುಗೋಡು–ನಗರ–ಕೊಲ್ಲೂರು–ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕು ಎಂದು ತಿಳಿಸಲಾಗಿದೆ. ನಗರ – ಸಿದ್ದಾಪುರ ರಾಜ್ಯ ಹೆದ್ದಾರಿ -278 ರಸ್ತೆ ತೀರ್ಥಹಳ್ಳಿಯಿಂದ ಯಡೂರು–ಸುಳಗೋಡು–ಮಾಸ್ತಿಕಟ್ಟೆ–ಹುಲಿಕಲ್ ಘಾಟ್–ಹೊಸಂಗಡಿ–ಸಿದ್ದಾಪುರ ಮೂಲಕ

ಬಾಳೆಬರೆ ಘಾಟಿಯಲ್ಲಿ ಭೂಕುಸಿತ: ಭಾರೀ ವಾಹನ ಸಂಚಾರ ಬಂದ್‌ Read More »

ಕರ್ನಾಟಕ

ಸಿಆರ್‌ಪಿಎಫ್‌ ವಾಹನ ಅಪಘಾತ: 3 ಸೈನಿಕರು ಸಾವು

(ನ್ಯೂಸ್‌ ಕಡಬ) newskadaba.com, ಆ.07: ಕೇಂದ್ರ ಮೀಸಲು ಪಡೆ ಸಿಬ್ಬಂದಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು, ಮೂವರು ಸೈನಿಕರು ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಜಮ್ಮು–ಕಾಶ್ಮೀರದ ಉಧಂಪುರ್ ಜಿಲ್ಲೆಯ ‌ ನಲ್ಹಾದಲ್ಲಿ ನಡೆದಿದೆ. 23 ಮಂದಿ ಸಿಆರ್‌ಪಿಎಫ್‌ ಯೋಧರು ಬಸಂತ್‌ಘರ್‌ನಿಂದ ಮರಳುತ್ತಿದ್ದರು. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪಿದರೆ, ಗಂಭೀರ ಗಾಯಗೊಂಡ ಮತ್ತೋರ್ವ ಯೋಧ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್‌ ಅವರು ಉಧಂಪುರ್‌ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದು, ಗಾಯಗೊಂಡ ಯೋಧರಿಗೆ

ಸಿಆರ್‌ಪಿಎಫ್‌ ವಾಹನ ಅಪಘಾತ: 3 ಸೈನಿಕರು ಸಾವು Read More »

ರಾಷ್ಟ್ರೀಯ ನ್ಯೂಸ್

ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ಜಾರಿಯಾಗಲಿದೆ: ಪ್ರಿಯಾಂಕ್‌ ಖರ್ಗೆ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಆಗುತ್ತಿರುವ ಗಲಾಟೆ ವಿಚಾರದಲ್ಲಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು. ಸರಿಯಾದ ಸುದ್ದಿ, ಸುಳ್ಳು ಸುದ್ದಿ ಎಂದು ಜನರೇ ಹಿಂಸಾಚಾರ ಮಾಡುವುದು ಸರಿಯಲ್ಲ. ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ತರುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಕೇಸ್‌ಗೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಐಟಿ ತನಿಖೆ ಆಗುತ್ತಿದೆ. ಮೊದಲು ತನಿಖೆ ಆಗಲಿ. ತನಿಖೆ ನಡೆಯುವಾಗ ಯಾರೂ ಹೀಗೆ ಮಾಡಬಾರದು ಎಂದಿದ್ದಾರೆ. ಫೇಕ್‌ ನ್ಯೂಸ್‌ ತಡೆಗೆ ಬಿಲ್‌ ಬಂದ

ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ಜಾರಿಯಾಗಲಿದೆ: ಪ್ರಿಯಾಂಕ್‌ ಖರ್ಗೆ Read More »

ಕರ್ನಾಟಕ
Scroll to Top