Ashitha Soodlu

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್‌ ಕಡಬ) newskadaba.com, ಆ.07: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇದು 218ನೇ ವರ್ಷದ ಫ್ಲವರ್‌ ಶೋ ಆಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದರು. ಕಿತ್ತೂರು ರಾಣಿ ಚೆನ್ನಮ್ಮ ವೀರ ಮಹಿಳೆ ಹಾಗೂ ವೀರ ವನಿತೆಯೂ ಹೌದು. ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮನ […]

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ರೈತರ ಹಿತಾಸಕ್ತಿ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳಲ್ಲ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.07: ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಸವಾಲೆಸೆದಿದ್ದಾರೆ. ದೆಹಲಿಯಲ್ಲಿ ನಡೆದ ಎಂಎಸ್ ಸ್ವಾಮಿನಾಥನ್ ಶತಮಾನೋತ್ಸವ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಹಾಗೂ ಇದಕ್ಕಾಗಿ ನಾನು ವೈಯುಕ್ತಿವಾಗಿ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ನನಗೆ

ರೈತರ ಹಿತಾಸಕ್ತಿ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳಲ್ಲ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕೊಡಗಿನಲ್ಲಿ ಕಾಡಾನೆ ದಾಳಿಗೆ ವೃದ್ದ ಮೃತ್ಯು

(ನ್ಯೂಸ್‌ ಕಡಬ) newskadaba.com, ಆ.07:‌ ಕಾಡಾನೆ ದಾಳಿ ವೃದ್ದರೊಬ್ಬರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕದ ಬಳಿ ಕಾಡಾನೆ ದಾಳಿ ನಡೆಸಿದ್ದು, ಕೊಪ್ಪದ ಮನೆ ನಿವಾಸಿ ಶಿವಪ್ಪ(72) ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್‌ ಪೂವಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಕ್ಷಣ ಆನೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೊಡಗಿನಲ್ಲಿ ಕಾಡಾನೆ ದಾಳಿಗೆ ವೃದ್ದ ಮೃತ್ಯು Read More »

ಕರ್ನಾಟಕ

ಬೆಳಗ್ಗೆ ಎದ್ದು ಎಬಿಸಿ ಜ್ಯೂಸ್‌ ಕುಡಿಯೋ ಅಭ್ಯಾಸ ಮಾಡಿಕೊಳ್ಳಿ…

(ನ್ಯೂಸ್‌ ಕಡಬ) newskadaba.com, ಆ.07:‌ ಎಬಿಸಿ ಜ್ಯೂಸ್‌ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದೇ ಇರುತ್ತದೆ. ಇದನ್ನು ಬೀಟ್ರೂಟ್‌, ಸೇಬು ಹಾಗೂ ಕ್ಯಾರೆಟ್‌ ಮಿಶ್ರಣ ಮಾಡಿ ತಯಾರಿಸಲಾಗುತ್ತದೆ. ಪ್ರತಿದಿನ ಇದನ್ನು ಕುಡಿಯುವುದರಿಂದ ದೇಹಕ್ಕೆ ವಿವಿಧ ರೀತಿಯ ಪೋಷಕಾಂಶಗಳು ದೊರೆಯುತ್ತವೆ. ಹಾಗಾಗಿ ಆರೋಗ್ಯ ತಜ್ಞರು ನಿಮ್ಮ ಆಹಾರದಲ್ಲಿ ಎಬಿಸಿ ಜ್ಯೂಸ್‌ನ್ನು ಶಿಫಾರಸು ಮಾಡುತ್ತಾರೆ. ಬೆಳಗ್ಗೆ ಎದ್ದ ತಕ್ಷಣ ಎಬಿಸಿ ಜ್ಯೂಸ್‌ ಕುಡಿಯುವುದರಿಂದ ಯಾವೆಲ್ಲಾ ಪ್ರಯೋಜನಗಳಿವೆ ಎನ್ನುವ ಮಾಹಿತಿ ಇಲ್ಲಿದೆ. ಬೀಟ್ರೂಟ್‌ ಹಾಗೂ ಸೇಬು ಹಣ್ಣಿನಲ್ಲಿ ವಿಟಮಿನ್‌ ಸಿ ಹಾಗೂ ಕ್ಯಾರೆಟ್‌ನಲ್ಲಿರುವ

ಬೆಳಗ್ಗೆ ಎದ್ದು ಎಬಿಸಿ ಜ್ಯೂಸ್‌ ಕುಡಿಯೋ ಅಭ್ಯಾಸ ಮಾಡಿಕೊಳ್ಳಿ… Read More »

ಆರೋಗ್ಯ ಮಾಹಿತಿ

ಮಹೇಶ್‌ ಶೆಟ್ಟಿ, ಗಿರೀಶ್‌ ಮಟ್ಟಣನವರ್‌, ಸಮೀರ್‌ ವಿರುದ್ದ ಎಫ್‌ಐಆರ್‌ ದಾಖಲು

(ನ್ಯೂಸ್‌ ಕಡಬ) newskadaba.com, ಆ.07:‌ ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣನವರ್‌ ಹಾಗೂ ಯೂಟ್ಯೂಬರ್‌ ಸಮೀರ್‌ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವರದಿಗಾರ ಹರೀಶ್‌ ಅವರ ದೂರಿನಂತೆ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್(ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2), ಯೂಟ್ಯೂಬರ್‌ ಸಮೀರ್(ಎ3) ಹಾಗೂ ಜಯಂತ್‌(ಎ4) ಎಂದು ಇತರರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಮಹೇಶ್‌ ಶೆಟ್ಟಿ, ಗಿರೀಶ್‌ ಮಟ್ಟಣನವರ್‌, ಸಮೀರ್‌ ವಿರುದ್ದ ಎಫ್‌ಐಆರ್‌ ದಾಖಲು Read More »

ಕರಾವಳಿ

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ

(ನ್ಯೂಸ್‌ ಕಡಬ) newskadaba.com, ಆ.07:‌ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಇಂದಿನಿಂದ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ ಆರಂಭಗೊಳ್ಳಲಿದೆ. ಈ ಫ್ಲವರ್‌ ಶೋ 12 ದಿನ ಪ್ರದರ್ಶನಗೊಳ್ಳಲಿದೆ. ತೋಟಗಾರಿಕಾ ಇಲಾಖೆ ನಡೆಸುವ 218ನೇ ಫಲಪುಷ್ಪ ಪ್ರದರ್ಶನದಲ್ಲಿ ಕಿತ್ತೂರಿನ ವೀರ ಪರಂಪರೆ ಅನಾವರಣಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಗಾಜಿನ ಮನೆಯಲ್ಲಿ ಫ್ಲವರ್‌ ಶೋಗೆ ಚಾಲನೆ ನೀಡಲಿದ್ದಾರೆ. 12 ದಿನಗಳ ಪ್ರದರ್ಶನಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ. ಕಿತ್ತೂರು ಸಂಸ್ಥಾನದ ಕೋಟೆಯ ಪ್ರಾತಿನಿಧಿಕ ಪುಷ್ಪ

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ Read More »

ಕರ್ನಾಟಕ

ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.07:‌ ಕರ್ನಾಟಕದ ಕರಾವಳಿ ಸೇರಿದಂತೆ 23 ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಧಾರವಾಡ, ಬಳ್ಳಾರಿ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೋಲಾರ, ವಿಜಯನಗರ, ಹಾಸನ, ಚಿಕ್ಕಬಳ್ಳಾಪುರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೀದರ್‌, ರಾಯಚೂರು, ಕಲಬುರ್ಗಿ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ

ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

ಚಹಾ ಮಾಡುವಾಗ ಈ ತಪ್ಪುಗಳನ್ನು ಮಾಡದಿರಿ…

(ನ್ಯೂಸ್‌ ಕಡಬ) newskadaba.com, ಆ.06:‌ ಹೆಚ್ಚಿನ ಮಂದಿಗೆ ದಿನ ಆರಂಭವಾಗುವುದೇ ಬೆಳಗ್ಗಿನ ಒಂದು ಕಪ್‌ ಚಹಾ ಕುಡಿಯುವುದರಿಂದ ಕೆಲವರಂತೂ ದಿನಕ್ಕೆ 3-4 ಬಾರಿ ಚಹಾ ಕುಡಿಯುತ್ತಾರೆ. ಆದರೆ, ಹೆಚ್ಚಿನವರು ಚಹಾ ಮಾಡುವುದರಿಂದ ಹಿಡಿದು ಕುಡಿಯುವ ತನಕ ಒಂದಷ್ಟು ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ ಎಂದು ಪೌಷ್ಟಿಕ ತಜ್ಞೆ ಕಿರಣ್‌ ಕುಕ್ರೇಜಾ ಹೇಳಿದ್ದಾರೆ. ಹೆಚ್ಚಿನ ಮಂದಿ ತಮ್ಮ ಮನೆಯಲ್ಲಿ ಚಹಾ ಸೋಸಲು ಪ್ಲಾಸ್ಟಿಕ್‌ ಜರಡಿಯನ್ನು ಬಳಸುತ್ತಾರೆ. ಆದರೆ, ಇದು ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮ ಬೀರುತ್ತದೆ.

ಚಹಾ ಮಾಡುವಾಗ ಈ ತಪ್ಪುಗಳನ್ನು ಮಾಡದಿರಿ… Read More »

ಲೈಫ್‍ಸ್ಟೈಲ್

ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ: ರಾಹುಲ್‌ಗೆ ಜಾಮೀನು

(ನ್ಯೂಸ್‌ ಕಡಬ) newskadaba.com, ಆ.06:‌ ಜಾರ್ಖಂಡ್‌ನಲ್ಲಿ ನಡೆಸಿದ್ದ ಚುನಾವಣೆ ರ್ಯಾಲಿಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಹೈಕೋರ್ಟ್‌ ನಿರ್ದೇಶನದಂತೆ ರಾಹುಲ್‌ ಗಾಂಧಿ ಇಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರಾದರು. ರಾಹುಲ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮುಂದಿನ ಹಂತದ ಪ್ರಕ್ರಿಯೆಗಳು ನಡೆಯಲಿವೆ ಎಂದು ರಾಹುಲ್‌ ಗಾಂಧಿ ಪರ ವಕೀಲರು ತಿಳಿಸಿದ್ದಾರೆ. 2018ರ ಸಾರ್ವಜನಿಕ ಸಭೆಯೊಂದರಲ್ಲಿ ಅಮಿತ್‌ ಶಾ

ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ: ರಾಹುಲ್‌ಗೆ ಜಾಮೀನು Read More »

ರಾಷ್ಟ್ರೀಯ ನ್ಯೂಸ್

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆಜೆ ಜಾರ್ಜ್‌ಗೆ ಬಿಗ್‌ ರಿಲೀಫ್..!‌

(ನ್ಯೂಸ್‌ ಕಡಬ) newskadaba.com, ಆ.06:‌ ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ 16 ಸಾವಿರ ಕೋಟಿ ರೂ. ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಕೆಜೆ ಜಾರ್ಜ್‌ ವಿರುದ್ದ ನಡೆಸಿದ ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೆಜೆ ಜಾರ್ಜ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಲೋಕಾಯುಕ್ತ ಎಸ್‌ಪಿ ಮತ್ತು ದೂರುದಾರರಾದ

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆಜೆ ಜಾರ್ಜ್‌ಗೆ ಬಿಗ್‌ ರಿಲೀಫ್..!‌ Read More »

ಕರ್ನಾಟಕ
Scroll to Top