Ashitha Soodlu

ಅಮೇರಿಕಾದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಯುವತಿ..!

(ನ್ಯೂಸ್‌ ಕಡಬ) newskadaba.com, ಆ. 28. ಟೆಕ್ಕಿ ಯುವತಿಯೊಬ್ಬರು ಅಮೇರಿಕಾದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿದ್ದಾರೆ. ಬಾಗಲಕೋಟೆಯ ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್‌ ಹನುಮಂತಗೌಡ ಅವರ ಪುತ್ರಿ ಶೃತಿ ಅಮೇರಿಕಾದಲ್ಲಿ ಉದ್ಯೋಗದಲ್ಲಿದ್ದಾರೆ. ಕೆಲ ವರ್ಷಗಳ ಹಿಂದೆ ಸ್ವದೇಶಕ್ಕೆ ಆಗಮಿಸಿದ್ದಾಗ ಶೃತಿ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಅಲ್ಲದೇ, ಅದರ ದೃಶ್ಯ ತನ್ನ ಮೊಬೈಲ್‌ಗೆ ಬರುವಂತೆ ಸಿಂಕ್‌ ಮಾಡಿಕೊಂಡಿದ್ದರು. ಮಂಗಳವಾರ ತಡರಾತ್ರಿ 1-2 ಗಂಟೆಯ ಮಧ್ಯೆ ಚಡ್ಡಿ ಗ್ಯಾಂಗ್ ‌ನ ಇಬ್ಬರು […]

ಅಮೇರಿಕಾದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಯುವತಿ..! Read More »

ಕರ್ನಾಟಕ

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ

(ನ್ಯೂಸ್‌ ಕಡಬ) newskadaba.com, ಆ.28:‌‌ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್‌ನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಪೊಲೀನ್‌ ಇಲಾಖೆ ಅಲರ್ಟ್‌ ಆಗಿದೆ. ಈ ಸಂಬಂಧ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್‌ ಇಲಾಖೆ ಹೊಸ ನಿಯಮ ರೂಪಿಸಿದ್ದು, ಈಗಾಗಲೇ ನಿಯಮ ಜಾರಿಯಾಗಿದೆ. ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರೊಂದಿಗೆ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಸಂಚರಿಸುವ

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ Read More »

ಕರ್ನಾಟಕ

ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು: ಡಿ.ಕೆ.ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.27: ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು,ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು

ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು: ಡಿ.ಕೆ.ಶಿವಕುಮಾರ್‌ Read More »

ಕರ್ನಾಟಕ

ಅರಶಿನ, ಕುಂಕುಮ ಬಗ್ಗೆ ಬಾನು ಮುಷ್ತಾಕ್‌ಗೆ ದ್ವೇಷದ ಭಾವನೆ ಇದೆ: ಪ್ರತಾಪ್‌ ಸಿಂಹ

(ನ್ಯೂಸ್‌ ಕಡಬ) newskadaba.com, ಆ.27: ಅರಶಿನ, ಕುಂಕುಮದ ಬಗ್ಗೆ ಬಾನು ಮುಷ್ತಾಕ್‌ ಅವರಿಗೆ ಏಕೆ ತಕರಾರು?. ಹಿಂದೂಗಳ ಮನೆಯಲ್ಲಿ ಯಾರೇ ಸುಮಂಗಲಿ ಹೋದರೂ ಕುಂಕುಮ ಕೊಡುತ್ತಾರೆ. ದೇವಾಲಯಕ್ಕೆ ಹೋದರೆ ಕುಂಕುಮ, ಪ್ರಸಾದ ನೀಡುತ್ತಾರೆ. ಇಂತ ಕುಂಕುಮವೇ ಬಾನು ಮುಷ್ತಾಕ್‌ ಅವರಿಗೆ ಕಿರಿಕಿರಿ ಉಂಟು ಮಾಡಿದೆ. ಅರಶಿನ ಕುಂಕುಮದ ಬಗ್ಗೆ ಅವರಿಗೆ ದ್ವೇಷದ ಭಾವನೆ ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮುಸ್ಲಿಂ ಎನ್ನುವ ಕಾರಣಕ್ಕೆ ಅವರನ್ನು ವಿರೋಧಿಸುತ್ತಿಲ್ಲ. ಬಾನು ಮುಷ್ತಾಕ್‌

ಅರಶಿನ, ಕುಂಕುಮ ಬಗ್ಗೆ ಬಾನು ಮುಷ್ತಾಕ್‌ಗೆ ದ್ವೇಷದ ಭಾವನೆ ಇದೆ: ಪ್ರತಾಪ್‌ ಸಿಂಹ Read More »

ಕರ್ನಾಟಕ

ಐಪಿಎಲ್‌ಗೆ ರವಿಚಂದ್ರನ್‌ಅಶ್ವಿನ್‌ ಗುಡ್‌ಬೈ

(ನ್ಯೂಸ್‌ ಕಡಬ) newskadaba.com, ಆ.27: ಟೀಂ ಇಂಡಿಯಾದ ಲೆಜೆಂಡ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌)ಗೆ ನಿವೃತ್ತಿ ಘೋಷಿಸಿದ್ದಾರೆ. ಅಶ್ವಿನ್‌ ಕಳೆದ ವರ್ಷ ಅಂತರಾಷ್ಟ್ರೀಯ ಕ್ರಿಕೆಟ್‌ಗ್‌ ವಿದಾಯ ಹೇಳಿ ಐಪಿಎಲ್‌ನಲ್ಲಿ ಮುಂದುವರಿದಿದ್ದರು. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ್ದಾರೆ. ಕಳೆದ ಸೀಸನ್‌ನಲ್ಲಿ ಅಶ್ವಿನ್‌ ಅವರು ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಕಣಕ್ಕಿಳಿದಿದ್ದರು. ಈ ವೇಳೆ ಅವರು 9 ಪಂದ್ಯಗಳಲ್ಲಿ ಬೌಲಿಂಗ್‌ ಮಾಡಿದ್ದು, 186 ಎಸೆತಗಳಲ್ಲಿ 283 ರನ್‌ ಬಿಟ್ಟು ಕೊಟ್ಟಿದ್ದರು. ಈ ನಡುವೆ

ಐಪಿಎಲ್‌ಗೆ ರವಿಚಂದ್ರನ್‌ಅಶ್ವಿನ್‌ ಗುಡ್‌ಬೈ Read More »

ಕ್ರೀಡಾ ನ್ಯೂಸ್

ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..?

(ನ್ಯೂಸ್‌ ಕಡಬ) newskadaba.com, ಆ.27:‌‌ ಕೆಲವು ಮಂದಿ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಸೇವನೆ ಮಾಡುತ್ತಾರೆ. ಈ ಅಭ್ಯಾಸ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದ್ದರೂ ಕೂಡ ಇದರಿಂದ ಹಲವಾರು ಅಡ್ಡಪರಿಣಾಮಗಳಿವೆ. ಹಾಗಾದರೆ ಇದರ ಸೇವನೆಯಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತದೆ? ಏಕೆ? ಎಂಬುದನ್ನು ತಿಳಿಯಿರಿ. ಖಾಲಿ ಹೊಟ್ಟೆಯಲ್ಲಿ ನಿಂಬೆ ರಸವನ್ನು ಕುಡಿಯುವುದರಿಂದ ಮೂಳೆಗಳು ದುರ್ಬಲಗೊಳ್ಳುತ್ತವೆ. ನಿಂಬೆಯಲ್ಲಿರುವ ಆಮ್ಲೀಯತೆ ಮೂಳೆಗಳಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಅವುಗಳನ್ನು ದುರ್ಬಲಗೊಳಿಸುತ್ತದೆ. ಇದು ವಯಸ್ಸಾದಂತೆ ಮೂಳೆ ಸಮಸ್ಯೆಗಳಿಗೆ ಕಾರಣವಾಗಬಹುದು.

ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..? Read More »

ಆರೋಗ್ಯ ಮಾಹಿತಿ

Gold Rate: ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆ.27:‌‌ ಚಿನ್ನದ ಬೆಲೆ ಸತತ ಎರಡನೇ ಬಾರಿಗೆ ಏರಿಕೆಯಾಗಿದೆ. ಇಂದು ಗಣೇಶ ಹಬ್ಬದ ದಿನ 35 ರೂ. ಹೆಚ್ಚಳವಾಗಿದೆ. ನಿನ್ನೆ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್‌ ಚಿನ್ನದ ಬೆಲೆ 93,900 ರೂ. ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,02,440 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ

Gold Rate: ಚಿನ್ನದ ಬೆಲೆ ಮತ್ತೆ ಏರಿಕೆ Read More »

ಕರ್ನಾಟಕ

ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದ ಮೂವರು ಆಟಗಾರರು ಔಟ್‌..!

(ನ್ಯೂಸ್‌ ಕಡಬ) newskadaba.com, ಆ.27:‌‌ ಆಸ್ಟ್ರೇಲಿಯಾ–ನ್ಯೂಝಿಲೆಂಡ್‌ ನಡುವಿನ ಟಿ20 ಸರಣಿಯು ಅ.1ರಿಂ ಆರಂಭವಾಗಲಿದೆ. ನ್ಯೂಝಿಲೆಂಡ್‌ನ ಮೂವರು ಆಟಗಾರರು ಈ ಸರಣಿಯಿಂದ ಹೊರಬಿದ್ದಿದ್ದಾರೆ. ತಂಡದ ಪ್ರಮುಖ ವೇಗಿ ವಿಲಿಯಂ ಒರೋಕ್‌ ಬೆನ್ನು ನೋವಿನಿಂದ ಬಳಲುತ್ತಿದ್ದು, ಮೂರು ವಾರಗಳ ಕಾಲ ಕ್ರಿಕೆಟ್‌ ಅಂಗಳದಿಂದ ದೂರ ಉಳಿಯಲಿದ್ದಾರೆ. ಆರಂಭಿಕ ಆಟಗಾರ ಫಿನ್‌ ಅಲೆನ್‌ ಅವರ ಬಲಗಾಲಿಗೆ ಗಾಯವಾಗಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಅಲಭ್ಯರಾಗಿದ್ದಾರೆ. ಆಲ್‌ರೌಂಡರ್‌ ಗ್ಲೆನ್‌ ಫಿಲಿಪ್ಸ್‌ ಅವರು ತೊಡೆಸಂದು ನೋವಿನ ಸಮಸ್ಯೆಯಿಂದ

ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದ ಮೂವರು ಆಟಗಾರರು ಔಟ್‌..! Read More »

ಕ್ರೀಡಾ ನ್ಯೂಸ್

ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆ.27:‌‌ ಜಮ್ಮು–ಕಾಶ್ಮೀರದ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಹತ್ತಾರು ಮಂದಿ ಸಿಲುಕಿದ್ದರು. ನಿರಂತರ ಮಳೆಯ ಪರಿಣಾಮ ಜಮ್ಮು–ಕಾಶ್ಮೀರದ ಇತರ ಪ್ರದೇಶಗಳಲ್ಲಿಯೂ ಹಾನಿ ಸಂಭವಿಸಿದೆ. ಸದ್ಯ ವೈಷ್ಣೋದೇವಿ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಜಮ್ಮು–ಕಾಶ್ಮೀರದಲ್ಲಿ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ತುರ್ತು ಸಭೆ ಕರೆದು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಆಹಾರ,

ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

Karnataka Rains: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.27:‌‌ ರಾಜ್ಯದಲ್ಲಿ ಇಂದಿನಿಂದ ಸೆ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಕೆಲವು ಒಳನಾಡು ಜಿಲ್ಲೆಗಳಿಗೆ ಆ.29ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ,

Karnataka Rains: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ Read More »

ಕರ್ನಾಟಕ
Scroll to Top