Ashitha Soodlu

ಪರೀಕ್ಷೆ ಇಲ್ಲದೇ ಪಾಸ್ ➤ ಕುಂಬಳಕಾಯಿ ಹೊಡೆದು ಪಿಯು ವಿದ್ಯಾರ್ಥಿಗಳ ಸಂಭ್ರಮ

(ನ್ಯೂಸ್ ಕಡಬ) newskadaba,ತುಮಕೂರು ಜೂ.16: ಕೊರೊನಾ ವೈರಸ್ ಅಬ್ಬರದ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷೆ ಬರೆಯದೇ ಪಾಸ್ ಆಗಿದ್ದಕ್ಕೆ ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿಗಳು ಕುಂಬಳಕಾಯಿ ಹೊಡೆದು ಸಂಭ್ರಮಿಸಿದ್ದಾರೆ.ತಿಪಟೂರು ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಗೇಟ್ ಮುಂದೆ ಕುಂಬಳಕಾಯಿ ಹೊಡೆದು, ಪಟಾಕಿ ಸಿಡಿಸಿ ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡಿದ್ದಾರೆ.   ಸಂಭ್ರಮಾಚರಣೆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅವರಿಗೆ ವಿದ್ಯಾರ್ಥಿಗಳು ಜೈಕಾರ ಹಾಕಿದ್ದು, ವೀಡಿಯೋ ಚಿತ್ರೀಕರಿಸಿ ಅದನ್ನ ರಿಮೇಕ್ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡಿರುವ […]

ಪರೀಕ್ಷೆ ಇಲ್ಲದೇ ಪಾಸ್ ➤ ಕುಂಬಳಕಾಯಿ ಹೊಡೆದು ಪಿಯು ವಿದ್ಯಾರ್ಥಿಗಳ ಸಂಭ್ರಮ Read More »

ಕರ್ನಾಟಕ

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಪ್ರಿಯಕರನಿಗಾಗಿ ಗಾಂಜಾ ತಲುಪಿಸುತ್ತಿದ್ದ ಇಂಜಿನಿಯರಿಂಗ್ ಪದವೀಧರೆಯನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿ ಎರಡೂವರೆ ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಅಂಧ್ರಪ್ರದೇಶದಿಂದ ಬಂದು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರೇಣುಕಾ ಬಂಧಿತ ಆರೋಪಿ. ಚೆನ್ನೈನ ಖಾಸಗಿ‌ ಕಾಲೇಜಿನಲ್ಲಿ ಸಿದ್ದಾರ್ಥ್ ಎಂಬಾತನನ್ನು ಪ್ರೇಮಿಸಿದ್ದ ರೇಣುಕಾ, ಸಿದ್ದಾರ್ಥ್ ಕೊಡುತ್ತಿದ್ದ ಗಾಂಜಾವನ್ನು ಗ್ರಾಹಕರಿಗೆ ತಲುಪಿಸುತ್ತಿದ್ದಳು.ಬೆಂಗಳೂರಿನ ಮುಖ್ಯರಸ್ತೆಗಳಲ್ಲಿರುವ ಓಯೋ ರೂಮ್ ಮಾಡುತ್ತಿದ್ದ ರೇಣುಕಾ, ಸಿದ್ದಾರ್ಥ್ ಜೊತೆ ಕಾನ್ಫರೆನ್ಸ್ ಕಾಲ್ ನಲ್ಲಿ ಮಾತನಾಡಿ ಗ್ರಾಹಕರನ್ನು ರೂಮ್ ಬಳಿ ಕರೆಸಿಕೊಂಡು ಗಾಂಜಾ ಪೂರೈಸಲಾಗುತಿತ್ತು. ತಾನು

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಗೆಯಲ್ಲಿ ತೇಲಿ ಬಂದ ಪೆಟ್ಟಿಗೆಯಲ್ಲಿತ್ತು 21 ದಿನದ ಕಂದಮ್ಮ..?!

(ನ್ಯೂಸ್ ಕಡಬ) newskadaba,ಗಾಜಿಪುರ ಜೂ.15: ನವಜಾತ ಶಿಶುವನ್ನು ಪೆಟ್ಟಿಗೆಯಲ್ಲಿಟ್ಟು ಗಂಗಾನದಿಯಲ್ಲಿ ತೇಲಿ ಬಿಟ್ಟಿರುವ ಘಟನೆ ದಾದ್ರಿಘಾಟ್​ ಬಳಿ ನಡೆದಿದೆ. ಗಾಳಿ ಜೋರಾಗಿ ಬೀಸಿದ್ದರಿಂದ ಮರದ ಪೆಟ್ಟಿಗೆಯು ದಡಕ್ಕೆ ಬಂದಿತ್ತು. ಅದರಲ್ಲಿ ಮಗು ಅಳುವ ಶಬ್ದ ಕೇಳಿ ಬಂದಿದ್ದು, ಸ್ಥಳೀಯರು ಆ ಬಾಕ್ಸ್​ ಅನ್ನು ತೆರೆದು ನೋಡಿದಾಗ ಅದರಲ್ಲಿ ಮಗು ಇರುವುದು ಪತ್ತೆಯಾಗಿದೆ. 21 ದಿನದ ಮಗುವಿದ್ದ ಆ ಪೆಟ್ಟಿಗೆಯಲ್ಲಿ ದುರ್ಗಾದೇವಿ ಮತ್ತು ವಿಷ್ಣುವಿನ ಫೋಟೋಗಳಿದ್ದವು. ಇದರೊಂದಿಗೆ ಮಗುವಿನ ಜಾತಕ ಕೂಡ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಪೆಟ್ಟಿಗೆಯಲ್ಲಿ ಮಗುವನ್ನು ಯಾರಿಟ್ಟರು,

ಗಂಗೆಯಲ್ಲಿ ತೇಲಿ ಬಂದ ಪೆಟ್ಟಿಗೆಯಲ್ಲಿತ್ತು 21 ದಿನದ ಕಂದಮ್ಮ..?! Read More »

ಕರಾವಳಿ

ಅಕ್ಷತಾ ಪಾಂಡವಪುರಗೆ “ನ್ಯೂಯಾರ್ಕ್ ಇಂಡಿಯನ್ ಫಿಲ್ಮ್” ಪ್ರಶಸ್ತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಸ್ಯಾಂಡಲ್‍ವುಡ್ ನಟಿ, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಅವರಿಗೆ ಪ್ರತಿಷ್ಠಿತ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ (ಎನ್‍ವೈಐಎಫ್‍ಎಫ್)ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.ಪಿಂಕಿ ಎಲ್ಲಿ? ಚಿತ್ರದಲ್ಲಿನ ನಟನೆಗಾಗಿ ಅಕ್ಷತಾ ಈ ಪ್ರಶಸ್ತಿ ಪಡೆದಿದ್ದಾರೆ.     ಇದೇ ಸಿನಿಮಾಕ್ಕೆ ಚಿತ್ರಕತೆ ಬರೆದ ಕನ್ನಡದ ಚಿತ್ರ ನಿರ್ದೇಶಕ ಪೃಥ್ವಿ ಕೋಣನೂರ್ ಅವರಿಗೆ ಅತ್ಯುತ್ತಮ ಚಿತ್ರಕತೆ ಪ್ರಶಸ್ತಿ ಲಭಿಸಿದೆ. ಜೂನ್ 4ರಿಂದ 13ರವರೆಗೆ ವರ್ಚುವಲ್ ಮಾಧ್ಯಮದಲ್ಲಿ 2021ನೇ ಸಾಲಿನ ಎನ್‍ವೈಐಎಫ್‍ಎಫ್ ನಡೆಯಿತು. ಪ್ರಶಸ್ತಿ ವಿಜೇತರಿಗೆ

ಅಕ್ಷತಾ ಪಾಂಡವಪುರಗೆ “ನ್ಯೂಯಾರ್ಕ್ ಇಂಡಿಯನ್ ಫಿಲ್ಮ್” ಪ್ರಶಸ್ತಿ Read More »

ಸಿನಿಮಾ

ಇಬ್ಬರು ಯುವಕರಿಗೆ “ಸಂಚಾರಿ ವಿಜಯ್” ಕಣ್ಣು ಜೋಡಣೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಸಂಚಾರಿ ವಿಜಯ್ ಅವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದೆ. ಅವರ ಸಾಮಾಜಿಕ ಕಾರ್ಯ, ನಟನೆ, ಒಳ್ಳೆಯ ಗುಣ ಇರುವಂತಹ ನಟನನ್ನ ಕಳೆದುಕೊಂಡು ಕನ್ನಡಿಗರು ಕಣ್ಣೀರು ಹಾಕುತ್ತಾ ಇದ್ದಾರೆ. ಆದರೆ ಈಗ ಅವರ ನಿಧನದ ನಂತರ ಮಾಡಿರುವ ಮಹಾತ್ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಅವರ ಅಂಗಾಂಗ ದಾನದ ನಿರ್ಧಾರಕ್ಕೆ ವೈದ್ಯರು ಅವರ ಪೋಷಕರಿಗೆ ಧನ್ಯವಾದ ತಿಳಿಸುತ್ತಾ ಇದ್ದಾರೆ. ಸಂಚಾರಿ ವಿಜಯ್ ಅವರ ಕಣ್ಣುಗಳನ್ನ ಮಿಂಟೋ ಆಸ್ಪತ್ರೆಯಲ್ಲಿ ಇಬ್ಬರು ಯುವಕರಿಗೆ

ಇಬ್ಬರು ಯುವಕರಿಗೆ “ಸಂಚಾರಿ ವಿಜಯ್” ಕಣ್ಣು ಜೋಡಣೆ Read More »

ಕರಾವಳಿ

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ನಟ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಕೊಲೆಗೆ ಸ್ಕೆಚ್ ಹಾಕಿದ್ದ ಪ್ರಕರಣ ಸಂಬಂಧ ಮತ್ತೊಬ್ಬ ಕಿಂಗ್ ಪಿನ್ ರಾಜೇಶ್ ಅಲಿಯಾಸ್ ಕರಿಯನನ್ನ ಬೆಂಗಳೂರಿನ ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.   ಮೂರು ತಿಂಗಳ ಹಿಂದೆ ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ನಡೆದಿತ್ತು. ಕೊನೆ ಕ್ಷಣದಲ್ಲಿ ಎಚ್ಚೆತ್ತ ಪೊಲೀಸರು, ಆ ಕೊಲೆಗೆ ರೆಡಿಯಾಗಿದ್ದ ಆರೋಪಿಗಳನ್ನು ಮಾರಕಾಸ್ತ್ರಗಳ ಸಮೇತ ಬಂಧಿಸಿದ್ದರು. ಈ ವೇಳೆ ಹಲವರು ಎಸ್ಕೇಪ್ ಕೂಡ ಆಗಿದ್ರು. ಅವರಲ್ಲಿ ಪ್ರಮುಖ

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.15:ಭಾರತದಲ್ಲಿ ಕೊರೋನಾ 2ನೇ ಅಲೆಯ ತೀವ್ರತೆ ಮತ್ತಷ್ಟು ಕಡಿಮೆಯಾಗಿದೆ. ಮಂಗಳವಾರ 60,471 ಜನರಲ್ಲಿ ಸೋಂಕು ಕಂಡು ಬಂದಿದ್ದು, ಇದು 75 ದಿನಗಳಲ್ಲೇ ಕನಿಷ್ಟವಾಗಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 2,726 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,95,70,881ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,77,031ಕ್ಕೆ ಏರಿಕೆಯಾಗಿದೆ.  ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ Read More »

ಕರಾವಳಿ

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು

(ನ್ಯೂಸ್ ಕಡಬ) newskadaba, ತಮಿಳುನಾಡು ಜೂ.15: ತಮಿಳುನಾಡಿನಲ್ಲಿ ಕೊರೋನಾ ಕೇಸುಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 21ರವರೆಗೆ ಮತ್ತೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಆದರೆ, ಇನ್ನು ಒಂದು ವಾರಗಳ ಕಾಲ ಲಾಕ್​ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆಯನ್ನೂ ಮಾಡಲಾಗಿದೆ. ಅದರಂತೆ, ತಿಂಗಳುಗಳ ಬಳಿಕ ತಮಿಳುನಾಡಿನಲ್ಲಿ ಬಾರ್, ಮದ್ಯದಂಗಡಿಗಳನ್ನು ಓಪನ್ ಮಾಡಲು ಅನುಮತಿ ನೀಡಲಾಗಿದೆ. ಇದರಿಂದ ಮದ್ಯಪ್ರಿಯರು ಬಹಳ ಖುಷಿಯಾಗಿದ್ದು, ಮಧುರೈನ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆಲ್ಕೋಹಾಲ್ ಬಾಟಲಿಗೆ ಆರತಿ ಬೆಳಗಿ, ತನ್ನ ಸಂತೋಷವನ್ನು ಹಂಚಿಕೊಂಡ ವಿಡಿಯೋ ವೈರಲ್ ಆಗಿದೆ.     ಮಧುರೈನ ರಸ್ತೆಬದಿಯ

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ರಾಜ್ಯದಲ್ಲಿ ಹೊಸ ಕೊರೊನಾ ಸೋಂಕು ಇಳಿಕೆಯ ಹಾದಿಯಲ್ಲಿದ್ದು ಮಂಗಳವಾರ 5041 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 1,32,600 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಪಾಸಿಟಿವಿಟಿ ದರ ಶೇ. 3.80ಗೆ ಕುಸಿದಿದೆ. ಬೆಂಗಳೂರಿನಲ್ಲಿ ಹೊಸ ಕೇಸ್‌ ಸಂಖ್ಯೆ ಸಾವಿರಕ್ಕಿಂತ ಕೆಳಕ್ಕಿಳಿದಿದ್ದು ಮಂಗಳವಾರ 985 ಪ್ರಕರಣ ಬೆಳಕಿಗೆ ಬಂದಿದೆ. ಹಾಸನದಲ್ಲಿ 522, ಮೈಸೂರಿನಲ್ಲಿ 490, ದಕ್ಷಿಣ ಕನ್ನಡದಲ್ಲಿ 482, ತುಮಕೂರಿನಲ್ಲಿ 329 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ Read More »

ಕರಾವಳಿ

ಸೀಲ್ ಡೌನ್ ಮಧ್ಯೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ನುಗ್ಗುತ್ತಿರುವ ಯಾತ್ರಾರ್ಥಿಗಳು

(ನ್ಯೂಸ್ ಕಡಬ) newskadaba,ಕುಕ್ಕೆ ಸುಬ್ರಹ್ಮಣ್ಯ ಜೂ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿದಿರುವ ನಡುವೆಯೇ, ಜಿಲ್ಲೆಯ 18 ಗ್ರಾಮ ಪಂಚಾಯಿತಿಗಳನ್ನು‌ ಸೀಲ್ ಡೌನ್ ಮಾಡಲಾಗಿದೆ. ನಾಡಿನ ನಂಬರ್ ವನ್ ಮುಜರಾಯಿ ದೇಗುಲವಾದ ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿ ಇರುವ ಸುಬ್ರಹ್ಮಣ್ಯ ಪಂಚಾಯಿತಿ ಕೂಡಾ ಸೀಲ್ ಡೌನ್ ಆಗಿದ್ದು, ಇದರ ನಡುವೆಯೇ ರಾಜ್ಯದ ಕೆಲ ಜಿಲ್ಲೆಗಳಿಂದ ಭಕ್ತರು‌ ಸುಬ್ರಹ್ಮಣ್ಯಕ್ಕೆ ಬರುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಏಪ್ರಿಲ್ 28ರಿಂದ ಕುಕ್ಕೆ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದೀಗ ಇಡೀ ಪ್ರದೇಶ ಸೀಲ್ ಡೌನ್ ಗೆ ಒಳಗಾಗಿದೆ.

ಸೀಲ್ ಡೌನ್ ಮಧ್ಯೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ನುಗ್ಗುತ್ತಿರುವ ಯಾತ್ರಾರ್ಥಿಗಳು Read More »

ಕರ್ನಾಟಕ
Scroll to Top