Ashitha Soodlu

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.05: ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ  ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.   ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ.  ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ […]

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳ: ಊಟ ಕೇಳಿದ ಹೆತ್ತ ತಾಯಿಗೆ ಥಳಿಸಿದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba,ಕಾರ್ಕಳ ಜೂ.05: ಊಟ ಕೇಳಿದ 82 ವರ್ಷದ ತಾಯಿಯನ್ನು ಮಗ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿ ಕ್ರೂರತ್ವ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.   ತಾಲೂಕಿನ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿ 82 ವರ್ಷದ ಯಶೋಧ ಹಾಗೂ ಮಗ ದಾಮೋದರನೊಂದಿಗೆ ವಾಸವಾಗಿದ್ದರು. ತಾಯಿ ಹಸಿವಿನಿಂದ ಮಗನಲ್ಲಿ ಊಟ ಕೇಳಿದ್ದಾರೆ. ಈ ವೇಳೆ ಕೋಪಗೊಂಡ ಮಗ ದಾಮೋದರ ಊಟ ನೀಡದೇ, ಎದ್ದು ನಿಲ್ಲಲು ಆಗದ ವೃದ್ಧೆ ತಾಯಿಯನ್ನು ಹೊಡೆದು ಮನೆಯಿಂದ ಹೊರಗೆ ಹಾಕಿದ್ದಾನೆ ಎನ್ನಲಾಗಿದೆ.

ಕಾರ್ಕಳ: ಊಟ ಕೇಳಿದ ಹೆತ್ತ ತಾಯಿಗೆ ಥಳಿಸಿದ ಪಾಪಿ ಪುತ್ರ Read More »

ಕರ್ನಾಟಕ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.     ಕಪ್ಪು ಶಿಲೀಂಧ್ರದ ಔಷಧಿಯ ಕೊರತೆ ಈಗ ಇಲ್ಲ. 15 ದಿನಗಳ ಹಿಂದೆ ಇದ್ದ ಕೊರತೆ ಈಗ ಇಲ್ಲ. ಕೇಂದ್ರದಿಂದ ದೊಡ್ಡ ಪ್ರಮಾಣದಲ್ಲಿ ಔಷಧಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳನ್ನು ಉಚಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ನಿರ್ದಿಷ್ಟ ದರ ನಿಗದಿಪಡಿಸಬೇಕಿದೆ. ಬೇಕಾದ ಹಾಗೆ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್ Read More »

ಕರ್ನಾಟಕ

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪತ್ತೆ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05:  ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ.ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ ಚಿಕಿತ್ಸೆ ನೀಡಬೇಕಾಗುತ್ತದೆ. ಆದರೆ ದುರದೃಷ್ಟ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.     ಮಧ್ಯಮ ವರ್ಗದವರು, ಬಡವರ್ಗದವರು ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದು, ಎಲ್ಲರಿಗೂ ಕಪ್ಪು

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪತ್ತೆ..! Read More »

ಕರ್ನಾಟಕ

ವಿಟ್ಲ: ತಂದೆ ಅಂತ್ಯಸಂಸ್ಕಾರ ಸಂದರ್ಭ ಹೃದಯಾಘಾತಕ್ಕೊಳಗಾಗಿ ಮಗ ಮೃತ್ಯು.!?

(ನ್ಯೂಸ್ ಕಡಬ) newskadaba,ವಿಟ್ಲ,ಜೂ.02: ಕೋವಿಡ್ ನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರ ನಡೆಸುತ್ತಿರುವಾಗ ಆರೋಗ್ಯ ವ್ಯತ್ಯಯವಾಗಿ ಮಗನೂ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದಿದೆ.ಪುಣಚ ಗ್ರಾಮದ ನಿವಾಸಿ ಪ್ರೊಪೆಸರ್ ಭುಜಂಗ ಶೆಟ್ಟಿ ಹಾಗೂ ಅವರ ಶೈಲೇಶ್ ಒಂದೇ ದಿನ ಅನಾರೋಗ್ಯ ತುತ್ತಾಗಿ ಮೃತ ಪಟ್ಟವರು.   ತಂದೆಯ ಅಂತ್ಯ ಸಂಸ್ಕಾರ ವಿಧಿ ವಿಧಾನಗಳು ಕೋವಿಡ್ ನಿಯಾಮಾವಳಿಯಂತೆ ನಡೆಯುತ್ತಿತ್ತು.ಈ ಸಂದರ್ಭ ಪುತ್ರ ಶೈಲೇಶ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.    

ವಿಟ್ಲ: ತಂದೆ ಅಂತ್ಯಸಂಸ್ಕಾರ ಸಂದರ್ಭ ಹೃದಯಾಘಾತಕ್ಕೊಳಗಾಗಿ ಮಗ ಮೃತ್ಯು.!? Read More »

ಕರಾವಳಿ, ಕರ್ನಾಟಕ

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಬೆಂಗಳೂರು, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 3 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಕಳೆದೆರಡು ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜೈಪುರದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ.     ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ Read More »

ಕರ್ನಾಟಕ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಮರಣ ಪ್ರಮಾಣ ಮಾತ್ರ ಏರುತ್ತಲೇ ಇದೆ. 3 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣವನ್ನು ರಾಜ್ಯ ಹೊಂದಿದ್ದು, ಈ ಮೂಲಕ ದೇಶದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ತಮಿಳುನಾಡು ರಾಜ್ಯ ಮೊದಲ ಸ್ಥಾನದಲ್ಲಿದೆ. ಮೇ ತಿಂಗಳ ಮಧ್ಯಂತರದಲ್ಲಿ ಕರ್ನಾಟಕ ರಾಜ್ಯವು ಅತೀ ಹೆಚ್ಚು ಸಕ್ರಿಯ ಪ್ರಕರಣ ಹೊಂದಿದ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿತ್ತು.     ಕೆಲವೇ ದಿನಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ Read More »

ಕರಾವಳಿ

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​ ಎಂದ ಸಿಎಂ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಕರ್ನಾಟಕದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ಮುಂದುವರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಅಲ್ಲದೆ, ಲಾಕ್​ಡೌನ್​ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ.   ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​ ಎಂದ ಸಿಎಂ..! Read More »

ಕರ್ನಾಟಕ

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba,ಉಡುಪಿ ಜೂ.02:ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 31 ರಂದು ಕಿಡಿಗೇಡಿಗಳು ‘DC Udupi’ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಪ್ರೊಫೈಲಿಗೆ ಜಿಲ್ಲಾಧಿಕಾರಿಗಳ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ.     ಈ ಕುರಿತು ಕಿಡಿಗೇಡಿಗಳ ವಿರುದ್ದ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66(c), 66(d) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02:ಕೊರೊನಾ ಎರಡನೇ ಅಲೆಗೆ ಸಿಬಿಎಸ್‍ಇ  12ನೇ ತರಗತಿಯ ಪರೀಕ್ಷೆ ರದ್ದಾದ ಬೆನ್ನಲ್ಲೇ ಕರ್ನಾಟಕದಲ್ಲಿ ಪರೀಕ್ಷೆ ರದ್ದಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿದೆ. ತಜ್ಞರ ವರದಿ ಆಧಾರಿಸಿ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ.2 ದಿನಗಳಲ್ಲಿ ತಜ್ಞರು, ಅಧಿಕಾರಿಗಳ ಜೊತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ. ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.ಕೊರೊನಾ ಸಮಯದಲ್ಲಿ ಪರೀಕ್ಷೆ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?! Read More »

ಕರ್ನಾಟಕ
Scroll to Top