news kadaba desk

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

( ನ್ಯೂಸ್ ಕಡಬ ) newskadaba.com ಚಿಕ್ಕಮಗಳೂರು, ಡಿ.12 ಮೂಡಿಗೆರೆ ತಾಲೂಕಿನಲ್ಲಿ ಅಪಘಾತಕ್ಕಿಡಾಗಿ ಆಸ್ಪತ್ರೆಯಲ್ಲಿ ಸಾವುಬದುಕಿನ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಮಗನ ಸಾವಿನ ದುಃಖದಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದು, ಇತರೆ ಅಂಗಾಂಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ಧನ್ಯ ಕುಮಾರ್ ಪೋಷಕರು ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ […]

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.12  ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರ ವಹಿವಾಟುಗಳಿಗೆ ಸಂಕಷ್ಟವಾಗಿದೆ ಎಂದು ತಿಳಿದುಬಂದಿದೆ. ವಾರದ ಆರಂಭದಲ್ಲೇ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ ಎಂದು ತಿಳಿದುಬಂದಿದೆ. ಜಿಟಿ ಜಿಟಿ ಮಳೆ ಮುಂದುವರೆದಿದ್ದು, ಚಳಿಯಿಂದ ತತ್ತರಿಸಿದ ಜನರಿಗೆ ಸೈಕ್ಲೋನ್ ಸಂಕಟ ಶುರುವಾಗಿದೆ. ಚಳಿ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಚಂಡಮಾರುತದ ಎಫೆಕ್ಟ್ ದಕ್ಷಿಣ ಜಿಲ್ಲೆಗಳಲ್ಲಿ ಆಗಲಿದ್ದು, ಇಂದು ಮತ್ತು ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ

➤ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ  Read More »

ಕರ್ನಾಟಕ

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.12 ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ದಾವಣಗೆರೆಯ ರುದ್ರೇಶ್ ಪಾಟೀಲ್ (20) ಎಂಬಾತ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಗಳೆಲ್ಲ ಶಿವಮೊಗ್ಗದಿಂದ ದಾವಣಗೆರೆಗೆ ಬಲೆನೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12. ಗುಡ್ಡಗಾಡು ಪ್ರದೇಶದಲ್ಲಿ ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 47 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಕ್ ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಈ ಘಟನೆ ನಡೆದಿದ್ದು, ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅವಘಢ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಸಬ್-ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್ ಒಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.10  ಮಂಗಳೂರಿನಲ್ಲಿ ಕುಕ್ಕರ್ ಪ್ರಕರಣದ ಆರೋಪಿ ಶಾರೀಕ್ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ ಅವರ ಗುರುತು ಪತ್ತೆಹಚ್ಚಿದ್ದು ಯಾವುದೇ ಮಾಹಿತಿ ನೀಡಲು ನಿರಾಕರಿಸಿದೆ ಎಂದು ವರದಿ ತಿಳಿಸಿದೆ. ಸ್ಪೋಟದ ಮುನ್ನ ಕೊಚ್ಚಿಗೆ ಹೋಗಿದ್ದು, ಅಲ್ಲಿ ವ್ಯವಹಾರ ನಡೆಸಿದವರ ಪೈಕಿ ನಾಲ್ವರ ಮಾಹಿತಿ ಲಭಿಸಿದ್ದು, ಇದರಲ್ಲಿ ಓರ್ವ ವಿದೇಶಿಗ, ಇಬ್ಬರು ಕೇರಳಿಯರು ಮತ್ತು ತಮಿಳುನಾಡು ನಿವಾಸಿಗಳು ಎಂದು ಪೊಲೀಸ್ ಇಲಾಖೆ ತಿಳಿಸಿದೆ.        

ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ Read More »

ಕರಾವಳಿ, ಕರ್ನಾಟಕ

ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಅವರೇ ಸಾಟಿ – ಧರ್ಮಪಾಲನಾಥ ಸ್ವಾಮೀಜಿ ➤ಆದಿಚುಂಚನಗಿರಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ೭೮ ನೇ ಜಯಂತ್ಯೋತ್ಸವ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಡಿ.10  ಸುಧೀರ್ಘ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿರುವ ನಾಥ ಪರಂಪರೆಯ ೭೨ ಜಗದ್ಗುರುಗಳನ್ನು ಕಂಡಿರುವ ಪ್ರಾಚೀನ ಇತಿಹಾಸ ಹೊಂದಿರುವ ಆದಿಚುಂಚನಗಿರಿ ಧರ್ಮ ಪೀಠವನ್ನು  ಭೈರವೈಕ್ಯರಾಗಿರುವ ಬಾಲಗಂಗಾಧರನಾಥ ಸ್ವಾಮೀಜಿಯವರು ಅಲಂಕರಿಸಿದ ಬಳಿಕ ಅಭೂತಪೂರ್ವ ಸಾಧನೆ ಮಾಡಿರುವ  ಸ್ವಾಮೀಜಿಯವರಿಗೆ ಅವರೇ ಸಾಟಿ ಬೇರೆ ಯಾರೂ ಇಲ್ಲ ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಶುಕ್ರವಾರ ಕಡಬ ಒಕ್ಕಲಿಗ ಗೌಡ ಸಮುದಾಯವ ಭವನದಲ್ಲಿ ದಶಂಬರ್ ೨೨ ರಂದು ಪುತ್ತೂರಿನಲ್ಲಿ

ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಅವರೇ ಸಾಟಿ – ಧರ್ಮಪಾಲನಾಥ ಸ್ವಾಮೀಜಿ ➤ಆದಿಚುಂಚನಗಿರಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ೭೮ ನೇ ಜಯಂತ್ಯೋತ್ಸವ ಪೂರ್ವಭಾವಿ ಸಭೆ Read More »

ಕರಾವಳಿ, ಕರ್ನಾಟಕ

ದಲಿತ ಮಕ್ಕಳಿಗೆ ಶಿಕ್ಷಣ ಕೊಡಿಸುವ ಹಿನ್ನಲೆ ➤ ದಲಿತ ಸಂಘಟನೆಯಿಂದ ಹೊಸ ಹೆಜ್ಜೆ

(ನ್ಯೂಸ್ ಕಡಬ ) newskadaba. com ಕುರುಗೋಡು, ಡಿ.10.ಶಿಕ್ಷಣದಿಂದ ಹಿಂದುಳಿದ ಗ್ರಾಮೀಣ ಭಾಗದಲ್ಲಿರುವ  ವಿವಿಧ  ಸಮುದಾಯದ ಮಕ್ಕಳಿಗೆ ರಾತ್ರಿ ಶಾಲೆ ಆರಂಭಿಸುವ ಕುರಿತು ಕರ್ನಾಟಕ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನಾ ಪದಾಧಿಕಾರಿ್ಗಳು ಹೊಸ ಹೆಜ್ಜೆ ಇಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆಳ ಸಮುದಾಯದ  ಮಕ್ಕಳು ಶಿಕ್ಷಣ ಪಡೆಯುವ ಆಸಕ್ತಿ ಇದ್ದರೂ , ಆರ್ಥಿಕ ಪರಿಸ್ಥಿತಿಯಿಂದಾಗಿ  ಶಿಕ್ಷಣದಿಂದ ವಂಚಿ್ತರಾಗಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳಿಗೆ ಸೌಲಭ್ಯವಿದ್ದರೂ ಶಿಕ್ಷಣದ ಕೊರತೆ ಕಾಡುತ್ತದೆ.ಎಷ್ಟೇ ಹಣ ಹಾಕಿದರೂ ಉತ್ತಮ ಶಿಕ್ಷಣ ಮಕ್ಕಳಿಗೆ ಸಿಗುವುದು ಕಷ್ಟಕರ  ಇಂತಹ

ದಲಿತ ಮಕ್ಕಳಿಗೆ ಶಿಕ್ಷಣ ಕೊಡಿಸುವ ಹಿನ್ನಲೆ ➤ ದಲಿತ ಸಂಘಟನೆಯಿಂದ ಹೊಸ ಹೆಜ್ಜೆ Read More »

ಕರ್ನಾಟಕ

ಡಿ.11 ರಂದು ಶ್ವಾನ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ.10 ಕರಾವಳಿ ಕೆನೈನ್ ಕ್ಲಬ್ ಆಶ್ರಯದಲ್ಲಿ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಇದೇ 11ರಂದು ಬೆಳಿಗ್ಗೆ 9ಕ್ಕೆ ಶ್ವಾನಗಳ ರಾಷ್ಟ್ರಮಟ್ಟದ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ವರದಿಯಾಗಿದೆ.   ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರವನ್ನು ಉದ್ಘಾಟಿಸಿ, ಪಾಲಿಕೆ ಸಚೇತಕ ಪ್ರೇಮಾನಂದ ಶೆಟ್ಟಿ ಮತ್ತು ಶ್ವೇತಾ ಪರೇಕ್ ಭಾಗವಹಿಸುವರು. ಕೊರಿಯ ದೇಶದ ಚೂಂಗ್-ಗೀ ಎಎಚ್ಎನ್ ಮತ್ತು ವೊಂಗ್ ಜಾಂಗ್ ಲೀ ಅವರು ಶ್ವಾನ ಪ್ರದರ್ಶನದ ಮುಖ್ಯ ತೀರ್ಪುಗಾರರಾಗಿರುವರು ಎಂದು ತಿಳಿದುಬಂದಿದೆ. ವಿವಿಧ ತಳಿಗಳ

ಡಿ.11 ರಂದು ಶ್ವಾನ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಡಿ.17 ರಂದು ಬೆಳ್ತಂಗಡಿಗೆ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ.10 ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇದೇ 17ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಬೆಳ್ತಂಗಡಿಯಲ್ಲಿ 17ರಂದು ಏರ್ಪಡಿಸಿರುವ ತಾಲ್ಲೂಕು ಮಟ್ಟದ ಕಬಡ್ಡಿ ಟೂರ್ನಿಯನ್ನು ಸಿದ್ದರಾಮಯ್ಯ ಉದ್ಘಾಟಿಸುವರು. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.        

ಡಿ.17 ರಂದು ಬೆಳ್ತಂಗಡಿಗೆ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ

ಬೈಕ್ ಢಿಕ್ಕಿ ➤ಪಾದಾಚಾರಿ ಸ್ಥಳದಲ್ಲೆ ಮೃತ್ಯು….!

(ನ್ಯೂಸ್ ಕಡಬ) newskadaba.com  ಕಟಪಾಡಿ ,.ಡಿ 10. ಬೈಕ್ ಒಂದು ಢಿಕ್ಕಿ ಹೊಡೆದು ಪಾದಾಚಾರಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಯಲ್ಲಿಸಂಭವಿಸಿದೆ. ಮೃತಪಟ್ಟವರನ್ನುಕಟಪಾಡಿಯ ಏಣಗುಡ್ಡೆಅಗ್ರಹಾರದ ಸತೀಶ್ ಎಂದು ಗುರುತಿಸಲಾಗಿದೆ.ಸತೀಶ್ ಎಂಬುವವರು ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಸತೀಶ್ ರವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ .ಸ್ಥಳಕ್ಕೆ ಕಟಪಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಢಿಕ್ಕಿ ➤ಪಾದಾಚಾರಿ ಸ್ಥಳದಲ್ಲೆ ಮೃತ್ಯು….! Read More »

ಕರ್ನಾಟಕ
Scroll to Top