news kadaba desk

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 10.  ಕೊಳವೆಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರದಂದು ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದೆ.     ಮೃತ ಬಾಲಕನನ್ನು ತನ್ಮಯ್ ಎಂದು ಗುರುತಿಸಲಾಗಿದೆ. ಈತ ಡಿ. 06ರಂದು ಸಂಜೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ತೆರೆದಿಟ್ಟಿದ್ದ ಕೊಳವೆಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರತೆಗೆದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.  

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2022-23 ಸಾಲಿನ ಬ್ಯಾಂಕ್ ಗಳ ಗೃಹ ಸಾಲದ ಬಡ್ಡಿ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 10. ಆರ್ ಬಿಐ ರೆಪೋ ದರ 35 ಮೂಲಾಂಶದಷ್ಟು ಏರಿಸಿದ ಹಿನ್ನೆಲೆ ಹಲವು ಬ್ಯಾಂಕ್ ಗಳು ಗೃಹ ಸಾಲಗಳ ಬಡ್ಡಿದರಗಳನ್ನು ಏರಿಸಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಬಡ್ಡಿ ದರ ಏರಿಸಿದ್ದು, ಪಿಎನ್ ಬಿ ಗೃಹ ಸಾಲ ಬಡ್ಡಿ ದರಗಳನ್ನು 35 ಬಿಪಿ ಎಸ್ ನಷ್ಟು ಹೆಚ್ಚು ಮಾಡಿವೆ.  ಆರ್ ಎಲ್ ಎಲ್ ಆರ್ ಅನ್ನು ಹಾಲಿ ಶೇ. 8.40 ರಿಂದ ಶೇ. 8.75ಕ್ಕೆ ಬದಲಾಯಿಸಲಾಗಿದೆ ಎಂದು

2022-23 ಸಾಲಿನ ಬ್ಯಾಂಕ್ ಗಳ ಗೃಹ ಸಾಲದ ಬಡ್ಡಿ ದರದಲ್ಲಿ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ.10. ಉದ್ಯಮಿಯೋರ್ವನನ್ನು ಕಿಡ್ನಾಪ್ ಮಾಡಿ ಒಂದು ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ.       ಅಪಹರಣಕ್ಕೆ ಒಳಗಾದ ವ್ಯಕ್ತಿಯನ್ನು ಯರಗಟ್ಟಿ ತಾಲೂಕಿನ ಸೊಪ್ಪಡ್ಲ ಗ್ರಾಮದ ಹೋಟೆಲೊಂದರ ಉದ್ಯಮಿ ಸಾಬಣ್ಣ ಮೆಗಾಡಿ ಎಂದು ಗುರುತಿಸಲಾಗಿದೆ. ಇವರನ್ನು ಅಪಹರಣ ಮಾಡಿದ ನಂತರ ಬೆದರಿಕೆ ಹಾಕಿ ಒಂದು ರೂಪಾಯಿ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಾಬಣ್ಣ ಮೆಗಾಡಿರವರು ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳನ್ನು ಬೆಳಗಾವಿ ಪೊಲೀಸರು

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ಪೊಲೀಸ್ ಮನೆಯಲ್ಲಿ ಕಳ್ಳ ತನ

(ನ್ಯೂಸ್ ಕಡಬ) newskadaba.com  ಮಂಡ್ಯ, ಡಿ. 10. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಸಮೀಪದ ಗ್ರಾಮದಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ ಘಟನೆ ನಡೆದಿದೆ.   ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕನ್ಸ್ ಟೇಬಲ್ ರವಿ ಅವರು ಪತ್ನಿ ಜೊತೆ ಅಸ್ಪತ್ರೆಗೆ ತೆರಳಿದ್ದು, ಮರಳಿ ಬಂದು ನೋಡಿದಾಗ ಚಿನ್ನಾಭರಣ ಕಳವಾಗಿರುವುದು ಗೊತ್ತಾಗಿದೆ. ಮನೆಯ ಬಾಗಿಲು ಅಥವಾ ಬೀರುವನ್ನು ಒಡೆಯದೆ ಕೀ ಬಳಸಿ, ಅಂದಾಜು 3.80 ಲಕ್ಷ ರೂ. ಮೌಲ್ಯದ

ಹಾಡಹಗಲೇ ಪೊಲೀಸ್ ಮನೆಯಲ್ಲಿ ಕಳ್ಳ ತನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಮುಕ ಶಿಕ್ಷಕ ಅಮಾನತಿಗೆ ಪೋಷಕರ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ.10. ವಿದ್ಯಾರ್ಥಿನಿಯರ ಜೊತೆ ಶಿಕ್ಷಕನೋರ್ವ ಅಸಭ್ಯ ವರ್ತನೆ ನಡೆಸಿದ ಘಟನೆ ಮಂಡ್ಯ ತಾಲೂಕಿನ ಬೇಬಿ ಸರ್ಕಾರಿ ಪೌಢಶಾಲೆಯಲ್ಲಿ ಸಂಭವಿಸಿದೆ.   ಕಾಮುಕ ಶಿಕ್ಷಕನ ದೌರ್ಜನ್ಯದಿಂದ ಬೇಸತ್ತ ವಿದ್ಯಾರ್ಥಿಗಳು ಆತನ ವಿರುದ್ದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರದ ಮೂಲಕ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ದಿಢೀರ್ SDMC ಸಭೆ ಆಯೋಜಿಸಿದ ಪೋಷಕರು ಶಿಕ್ಷಕರ ವಿರುದ್ದ ರೊಚ್ಚಿಗೆದ್ದು ಹಲ್ಲೆಗೆ ಯತ್ನಿಸಿದ್ದಲ್ಲದೇ, ಆರೋಪಿ ಶಿಕ್ಷಕನ ಅಮಾನತಿಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.    

ಕಾಮುಕ ಶಿಕ್ಷಕ ಅಮಾನತಿಗೆ ಪೋಷಕರ ಒತ್ತಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ಮಂಟಪದಿಂದ ಓಡಿ ಹೋದ ವರ!!!!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ.10. ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ವರನು ಮದುವೆ ಮಂಟಪದಿಂದ ಓಡಿ ಹೋದ ಆತಂಕಕಾರಿ ಘಟನೆ ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಸಂಭವಿಸಿದೆ.     ವರನು ವಧುವಿನ ಮನೆಯವರಲ್ಲಿ ವರದಕ್ಷಿಣೆಯಾಗಿ ಬೈಕ್ ನ್ನು ಬೇಡಿಕೆಯಿಟ್ಟಿದ್ದು, ಅವರು ಕೊಡಿಸದೇ ಇದ್ದ ಹಿನ್ನೆಲೆ ವರನು ಮಂಟಪದಿಂದಲೇ ಓಡಿ ಹೋಗಿದ್ದಾನೆ ಎನ್ನಲಾಗಿದೆ. ನಂತರ ಎರಡು ದಿನಗಳ ಬಳಿಕ ಮದುವೆ ಬೇಡ ಎಂದು ಹೋದ ವರನು ಬಂದು ಅದೇ ಮದುವೆ ಮಂಟಪದಲ್ಲಿ ಮದುವೆಯಾದ ಘಟನೆ ವರದಿಯಾಗಿದ್ದು, ಈ

ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ಮಂಟಪದಿಂದ ಓಡಿ ಹೋದ ವರ!!!! Read More »

ರಾಷ್ಟ್ರೀಯ ನ್ಯೂಸ್

ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಹಾಸನ, ಡಿ.10. ಒಂಟಿ ಕಾಡಾನೆಯೊಂದು ಪ್ರತ್ಯಕ್ಷವಾದ ಘಟನೆ ಬೇಲೂರು ತಾಲೂಕಿನ ಆರೇಹಳ್ಳಿ ಗ್ರಾಮದಲ್ಲಿ ನಡೆದಿದೆ.     ಇದು ಆರೇಹಳ್ಳಿಯ ಗ್ರಾಮದ ಪ್ರಮುಖ ರಸ್ತೆ ಓಡಾಡುತ್ತಿದ್ದು, ಇದರ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ನಾಡಿಗೆ ಬರಲು ಪ್ರಾರಂಭಿಸಿವೆ. ಇದರಿಂದ ಜನರಿಗೆ ಹೊರಗಡೆ ಬರಲು ಕಷ್ಟವಾಗುತ್ತಿದೆ.

ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ ➤ ವಿಡಿಯೋ ವೈರಲ್ Read More »

ಕರ್ನಾಟಕ

ಚಂಡಮಾರುತ ಎಫೆಕ್ಟ್ ➤ಬೆಂಗಳೂರು ಗಡ ಗಡ…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 10. ತೀವ್ರ ಚಳಿಗೆ ಅಕ್ಷರಶಃ ನಡುಗಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ. ಇನ್ನೂ ಎರಡು ಮೂರು ದಿನ ಹೀಗೆಯೇ ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ವಾರಕ್ಕೆ ಹೋಲಿಸಿದರೆ ಐದಾರು ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಲ್ಲಿ ಕುಸಿತ ದಾಖಲಾಗಿರುವುದಾಗಿ ತಿಳಿದುಬಂದಿದೆ.   ಶುಕ್ರವಾರ ನಸುಕಿನ ಹೊತ್ತು ದಿನದ ಕನಿಷ್ಠ ತಾಪಮಾನ 18.2 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಮಧ್ಯಾಹ್ನದ ವೇಳೆಗೆ 17.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ರಾಜ್ಯ ಹವಾಮಾನ ಕೇಂದ್ರದ

ಚಂಡಮಾರುತ ಎಫೆಕ್ಟ್ ➤ಬೆಂಗಳೂರು ಗಡ ಗಡ…!!!! Read More »

ಕರ್ನಾಟಕ

ಖಾಸಗಿ ಬಸ್ಸು ಮತ್ತು ಕಾರು ಡಿಕ್ಕಿ➤ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 10. ಖಾಸಗಿ ಬಸ್ಸು ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ಉಡುಪಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಎಂಬಲ್ಲಿ ನಡೆದಿದೆ.     ಮೃತಪಟ್ಟವರನ್ನು ಆಂಧ್ರದ ಮೂಲದವರೆಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಖಾಸಗಿ ಬಸ್ಸು ಮತ್ತು ಕಾರು ಡಿಕ್ಕಿ➤ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ ಡಿ.09. ವಿಶಾಖಪಟ್ಟಣಂ ವ್ಯಾಪ್ತಿಯ ರೈಲು ನಿಲ್ದಾಣದಲ್ಲಿ ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಎಂ.ಶಶಿಕಲಾ (22) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಎಂಸಿಎ ಓದುತ್ತಿದ್ದ ಆಕೆ ಬುಧವಾರ ಬೆಳಗ್ಗೆ ಅಣ್ಣಾವರಂನಿಂದ ಗುಂಟೂರು – ರಾಯಗಡ ರೈಲಿನಲ್ಲಿ ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಾಗ ಅಪಘಾತಕ್ಕೆ ಗುರಿಯಾಗಿದ್ದು, ರೈಲ್ವೆ ರಕ್ಷಣಾ ತಂಡವು ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಾಹಿತಿ ಪಡೆದ ಕುಟುಂಬ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದು,

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top