news kadaba desk

Infosys’ಗೆ ನೀಡಿದ್ದ 32,000 ಕೋಟಿ ರೂ. ‘GST’ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನಾಟಕೀಯ ಬೆಳವಣಿಗೆಯೊಂದರಲ್ಲಿ ಇನ್ಫೋಸಿಸ್‍ ಗೆ ನೀಡಿದ್ದ 32,403 ಕೋಟಿ ರೂಪಾಯಿಗಳ ಜಿಎಸ್ಟಿe ಡಿಮ್ಯಾಂಡ್ ನೋಟಿಸ್’ನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಕೇಂದ್ರೀಯ ಜಿಎಸ್’ಟಿ ಗುಪ್ತಚರ ವಿಭಾಗಕ್ಕೆ ಉತ್ತರ ಕೊಡಬೇಕೆಂದು ಇನ್ಫೋಸಿಸ್’ಗೆ ಸೂಚಿಸಿದೆ. ರಾಜ್ಯ ಸರ್ಕಾರ, ತಾನು ನೀಡಿರುವ ಜಿಎಸ್ ಟಿ ನೋಟಿಸನ್ನು ಹಿಂಪಡೆದಿದೆ ಎಂದು ಖುದ್ದು ಇನ್ಫೋಸಿಸ್ ಸಂಸ್ಥೆಯೇ ಪ್ರಕಟಿಸಿದೆ. ರಾಜ್ಯ ಸರ್ಕಾರವು ನೋಟಿಸ್ ಹಿಂಪಡೆದಿದ್ದು, 32,000 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಆರೋಪಗಳ ಬಗ್ಗೆ ಕೇಂದ್ರೀಯ ಜಿಎಸ್ ಟಿ […]

Infosys’ಗೆ ನೀಡಿದ್ದ 32,000 ಕೋಟಿ ರೂ. ‘GST’ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ Read More »

ಕರ್ನಾಟಕ

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಆ.02. ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ರಾಯಚೂರಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ವಿಷಾಹಾರ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಭೀಮಣ್ಣ( 60), ಈರಮ್ಮ ( 57) ಮಲ್ಲೇಶ (21), ಪಾರ್ವತಿ ( 19) ಮೃತರು ಎಂದು ತಿಳಿದುಬಂದಿದೆ. ಮತ್ತೋರ್ವ ಮಗಳು ಮಲ್ಲಮ್ಮ (23) ಸ್ಥಿತಿ ಗಂಭೀರವಾಗಿದೆ. ಮಾಂಸಾಹಾರ ಸೇವನೆ ಮಾಡಿದ್ದು, ಫುಡ್ ಪಾಯಿಸನ್ ನಿಂದ ಸಾವು ಸಂಭವಿಸಿರಬಹುದು

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. 21 ವರ್ಷದ ಪತಿಯ ಕಿರುಕುಳ ತಾಳಲಾರದೆ 11 ತಿಂಗಳ ಮಗುವಿನ 17 ವರ್ಷ ವಯಸ್ಸಿನ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಗಂಗಮ್ಮನಗುಡಿ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತನ್ನ ಪತಿ ಕೌಶಿಕ್ ನನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ ಹೊಡೆದು ಪ್ರೊಫೆಸರ್ ಮೃತ್ಯು ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಆ.02. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರ ಸಾವಿಗೆ ಕಾರಣರಾದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.  ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ್ಮಜ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೆಲವು ಗಂಟೆಗಳ ನಂತರ

ಕಾರು ಢಿಕ್ಕಿ ಹೊಡೆದು ಪ್ರೊಫೆಸರ್ ಮೃತ್ಯು ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ Read More »

ರಾಷ್ಟ್ರೀಯ ನ್ಯೂಸ್

ಪರಿಹಾರ ಕೇಂದ್ರಗಳಲ್ಲಿ ಕಣ್ಣೀರು, ದುಃಖದಲ್ಲಿ ಕಳೆಯುತ್ತಿರುವ ಕರ್ನಾಟಕದ 40-45 ಕುಟುಂಬಗಳು

(ನ್ಯೂಸ್ ಕಡಬ) newskadaba.com ಕೇರಳ, ಆ.02. ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವು ಕರ್ನಾಟಕದ 40-45 ಕುಟುಂಬಗಳಿಗೆ ವಿನಾಶ ಮತ್ತು ಹೃದಯ ವಿದ್ರಾವಕ ಸಂಕಟವನ್ನು ತಂದಿದೆ. ಅವರು ಈಗ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ. ಈ ದುರಂತವು ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ ಮಾತ್ರವಲ್ಲದೆ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅನೇಕರು ಮಾಹಿತಿಗಾಗಿ ಪರಿಹಾರ ಕೇಂದ್ರಗಳಿಗೆ ಆಗಮಿಸಿದ್ದಾರೆ, ಇನ್ನೂ ಅನೇಕರು ಶವಗಳನ್ನು ಗುರುತಿಸಲು ಶವಾಗಾರದಲ್ಲಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಪರಿಹಾರ ಕೇಂದ್ರಗಳಲ್ಲಿ ಕಣ್ಣೀರು, ದುಃಖದಲ್ಲಿ ಕಳೆಯುತ್ತಿರುವ ಕರ್ನಾಟಕದ 40-45 ಕುಟುಂಬಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಟ್ರೊದಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ನವದೆಹಲಿ, ಆ.02. ಮೆಟ್ರೋವನ್ನು ಅಲ್ಲಿನ ನಿವಾಸಿಗಳಿಗೆ ಮತ್ತು ಆ ನಗರಕ್ಕೆ ಭೇಟಿ ನೀಡುವ ಜನರ ಜೀವನಾಡಿ ಎಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಮೆಟ್ರೋ ಜನರನ್ನು ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯುವುದಕ್ಕಿಂತ ಅದರಲ್ಲಿ ನಡೆಯುವ ಚಟುವಟಿಕೆಗಳ ವೈರಲ್ ವೀಡಿಯೊಗಳಿಗೆ ಹೆಚ್ಚು ಪ್ರಸಿದ್ಧವಾಗಿದೆ. ದೆಹಲಿ ಮೆಟ್ರೋ ಆಸನಗಳಿಗಾಗಿ ಸಹ-ಪ್ರಯಾಣಿಕರ ನಡುವಿನ ಜಗಳಗಳು, ಪ್ರಣಯ ದೃಶ್ಯಗಳು, ಜೋಡಿಗಳ ಪ್ರೇಮ ಮೇಕಿಂಗ್, ಗಾಸಿಪ್ ಮತ್ತು ಲೈವ್ ಹಾಡುಗಳು ಅಥವಾ ಇತರ ಹಲವು ರೀತಿಯ ನೃತ್ಯ ರೀಲ್‌ಗಳಿಗಾಗಿ ಆಗಾಗ್ಗೆ

ಮೆಟ್ರೊದಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೂಕುಸಿತದ ಮೊದಲು, ನಂತರದ satellite image ಬಿಡುಗಡೆ ಮಾಡಿದ ISRO

(ನ್ಯೂಸ್ ಕಡಬ) newskadaba.com ನವದೆಹಲಿ, ಆ.02. ಕನಿಷ್ಠ 250ಕ್ಕೂ ಅಧಿಕ ಸಾವಿಗೆ ಕಾರಣವಾದ ಕೇರಳದ ವಯನಾಡು ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಇಂದು ವಯನಾಡಿನ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ. ವಯನಾಡ್‌ ಭೂಕುಸಿತದ ಮೊದಲು ಮತ್ತು ನಂತರದ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದ್ದು, ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ ಪ್ರದೇಶಕ್ಕೆ ಹಾನಿ ವ್ಯಾಪಿಸಿದ್ದು, ಹೀಗಾಗಿ ಇಷ್ಟೂ ಪ್ರದೇಶದಲ್ಲಿ

ಭೂಕುಸಿತದ ಮೊದಲು, ನಂತರದ satellite image ಬಿಡುಗಡೆ ಮಾಡಿದ ISRO Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.02.  ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಎಂ ಶಶಿಧರ ಹೆಗ್ಡೆ ನೇತೃತ್ವದಲ್ಲಿ ಚಿಲಿಂಬಿ ಆದರ್ಶನಗರದಲ್ಲಿ ಸನ್ಮಾನ ಮಾಡಲಾಯಿತು. ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಎಚ್ಚೆತ್ತ ಬಸ್‌ನ‌‌ ಚಾಲಕ ಮತ್ತು‌ ನಿರ್ವಾಹಕ ಪ್ರಯಾಣಿಕರಿದ್ದ ಬಸ್ ಅನ್ನು ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆ ಬಾಗಿಲಿಗೆ ತೆಗೆದುಕೊಂಡು ಹೋಗಿ ವಿದ್ಯಾರ್ಥಿಯ ಪ್ರಾಣ ರಕ್ಷಣೆ ಮಾಡಿದ ಬಸ್ ಚಾಲಕ ನಿರ್ವಾಹಕರಾದ ಗಜರಾಜ್ ಕುಂದರ್ ಪೂಜಾರಿ, ಮಹೇಶ್ ಪೂಜಾರಿ,ಸುರೇಶ್ ಬಜ್ಪೆಯವರನ್ನು

ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಮೂವರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಆ.02. ಹೊರವಲಯದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಜನರ ಸಾವಿಗೆ ಕಾರಣವಾಗಿದ್ದ ಮಕ್ನಾ ಕಾಡಾನೆಯನ್ನ ಕೊನೆಗೂ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದೆ. ಸೆರೆಯಾದ ಕಾಡಾನೆಯು ವಿಚಿತ್ರ ಸ್ವಭಾವ ಹೊಂದಿದ್ದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿತ್ತು. ದುಬಾರೆ ಹಾಗೂ ಮತ್ತಿಗೋಡುವಿನಿಂದ ಕುಮ್ಕಿ ಆನೆಗಳನ್ನು ಕರೆತಂದು ಎರಡು ದಿನ ಕಾರ್ಯಾಚರಣೆ ನಡೆಸಿ ಆನೆಯನ್ನ ಸೆರೆ ಹಿಡಿಯಲಾಗಿದೆ.    

ಮೂವರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ Read More »

ಕರ್ನಾಟಕ

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ

(ನ್ಯೂಸ್ ಕಡಬ) newskadaba.com ಉಡುಪಿ, ಆ.02. ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ ಎನ್ನಲಾಗಿದೆ.  

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top